ಕಲಬುರಗಿ: ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ / ಕ್ಲಿನಿಕ್ ಸಿಬ್ಬಂದಿಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.
ದೇಶದಲ್ಲಿಯೇ ಕೊರೋನಾ ವೈರಸ್ ಸೋಂಕಿಗೆ ಮೊದಲ ಮೃತ ಪ್ರಕರಣದಿಂದ ಸುದ್ದಿಯಾದ ಕಲಬುರಗಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರು ಹೆಚ್ಚುತ್ತಿದ್ದು, ಪ್ರಸ್ತುತ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಸೋಂಕಿತರು ಸಕ್ರಿಯರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಮಹಾಮಾರಿಗೆ ಹೆದರಿ ಬಹುತೇಕ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರು ಹಾಜರಾಗುತ್ತಿರುವುದು ಗಮನಕ್ಕೆ ಬಂದಿದೆ. ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ಸಿಬ್ಬಂದಿಗಳೇ ಇಲ್ಲದಿದ್ದರೆ ಚಿಕಿತ್ಸೆಗೆ ತುಂಬಾ ತೊಂದರೆಯಾಗಲಿದೆ.
ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್-19 ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ರೋಗಿಗೆ ಸೂಕ್ತ ಚಿಕಿತ್ಸೆ ನೀಡಲು ಆಯಾ ಆಸ್ಪತ್ರೆ ಮುಖ್ಯಸ್ಥರು ತಮ್ಮ ಸಿಬ್ಬಂದಿಗಳು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ.
ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕ್ರಮ: ಆರೋಗ್ಯ ಸಿಬ್ಬಂದಿಗಳು ಕೂಡಲೆ ಕರ್ತವ್ಯಕ್ಕೆ ಹಾಜರಾಗುವಂತೆ ಜಿಲ್ಲಾಧಿಕಾರಿ ಶರತ್ ಬಿ. ಸೂಚನೆ ನೀಡಿದ್ದು, ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ
ಟಿ.ಹೆಚ್.ಓ ಮತ್ತು ಪೊಲೀಸ್ ಠಾಣೆಗೆ ಮಾಹಿತಿ ನೀಡಿ: ಸಿಬ್ಬಂದಿಗಳು ಗೈರಾದಲ್ಲಿ ಕೂಡಲೇ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…