ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್‍ನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳೆಂದ್ರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಪದೇ ಪದೇ ಕೈತೊಳೆದುಕೊಂಡು ಶುಚಿಯಾಗಿ ಇರೋದು ಎಂದು ಶ್ರೀದೇವಿ ಸಂಗೀತ ಸಾಹಿತ್ಯ ಸಾಂಸ್ಕøತಿಕ ಛಾಯಾಚಿತ್ರ ಕಲಾ ಸಂಸ್ಧೆ (ರಿ) ಪ್ರಧಾನ ಕಾರ್ಯದರ್ಶಿ ಬಸವರಾಜ ತೋಟದ್ ಹೇಳಿದರು.
ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರ ಗ್ರಾಮದಲ್ಲಿ ರಾಜ್ಯಸಭೆ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆಯವರು 78ನೇ ಹುಟ್ಟು ಹಬ್ಬದ ನಿಮಿತ್ಯವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ 120 ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಮಾತನಾಡಿದ ಅವರು, ಕೊರೋನಾ ವೈರಸ್ ಭಯದದಿಂದಾಗಿ ಹಲವರು ಸಾವನ್ನಪ್ಪುತ್ತಿದ್ದಾರೆ. ಆದರೆ ಪ್ರತಿಯೊಬ್ಬರು ಉತ್ತಮವಾದ ಆಹಾರ ಸೇವನೆ ಮಾಡಿ, ಇಮುನಿಟಿ ಪವರ್ ಹೆಚ್ಚಿಗೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಾ. ಮಲ್ಲಿಕಾರ್ಜುನ ಖರ್ಗೆಯವರು ಕೂಡ ಕೋವಿಡ್-19 ತಡೆಗಟ್ಟುವಲ್ಲಿ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ತಮ್ಮ ಹುಟ್ಟು ಹಬ್ಬದ ದಿನದಂದೆ ಕಲಬುರಗಿ, ರಾಯಚೂರು ಜಿಲ್ಲೆಗಳಿಗೆ ನೈಸರ್ಗಿಕವಾದ 650 ಬೆಡ್ ಗಳನ್ನು ವಿತರಿಸಿದ್ದಾರೆ.
ಅಂತಹವರ ಹುಟ್ಟು ಹಬ್ಬ ಕೂಲಿ ಕಾರ್ಮಿಕರೊಂದಿಗೆ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಖರ್ಗೆ ಅವರು 9 ಬಾರಿ ಶಾಸಕರಾಗಿ, ಎರಡು ಸಲ ಸಂಸದರಾಗಿದ್ದುಕೊಂಡು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಕಳೆದ ಎರಡು ಅವಧಿಯಲ್ಲಿ ಸಂಸದರಾಗಿದ್ದ ಸಂದರ್ಭದಲ್ಲಿ ಕಲಬುರಗಿ ಮಾದರಿ ಜಿಲ್ಲೆಯನ್ನಾಗಿ ಮಾಡಿದ್ದಾರೆ. ಈಗಿನ ಇಎಸ್ ಐ ಆಸ್ಪತ್ರೆ ಸೇರಿದಂತೆ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ನಂದೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕಲ್ಲಪ್ಪ ಅಪಚಂದ, ಮಲ್ಲಪ್ಪ ದೊಡ್ಡಿ, ಮಹೇಶ ದೇವಣಿ, ರಾಜಕುಮಾರ ಸರಡಗಿ, ಅಮರ ಗುಜ್ಜನ, ಅನೀಲಕುಮಾರ ಜಾದವ, ಗೋಪಾಲ ಬೆಳಗುಂಪಿ, ಮಹಾಂತೇಶ ಕಾಂಬಳೆ, ವಿಜಯಕುಮಾರ್ ಜಾಧವ, ಯುವ ಮುಖಂಡರಾದ ಭೀಮಾಶಂಕರ ಮರತೂರ ಕಾರ್ಯಕ್ರಮ ನಿರೂಪಣೆ ಮಾತನಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…