ವಾಡಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಆಗ್ರಹ

0
17

ವಾಡಿ: ಪಟ್ಟಣದ ಪುರಸಭೆ ಆಡಳಿತದ ಎರಡನೇ ಅವದಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ಮೀಸಲಾತಿ ಪ್ರಕಟಗೊಂಡು 45 ದಿನಗಳು ಕಳೆದಿವೆ. ಆದರೂ ಚುನಾಯಿತ ವಾರ್ಡ್ ಜನಪ್ರತಿನಿಧಿಗಳಿಗೆ ಅಧಿಕಾರ ನೀಡುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯವಹಿಸಿದೆ ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಪ್ಪ ಎಂ.ವಾಡೇಕರ ಆರೋಪಿಸಿದ್ದಾರೆ.

ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಡೇಕರ್, ಹಾಲಿ ಅಧ್ಯಕ್ಷ-ಉಪಾಧ್ಯಕ್ಷರ 30 ತಿಂಗಳ ಆಡಳಿತ ಅವದಿ ಪೂರ್ಣಗೊಂಡಿದೆ. ಏರಡನೇ ಅವದಿ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಬಿಸಿ(ಎ) ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ಪ್ರಕಟಿಸಿ ಸರಕಾರ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳು ಚಿತ್ತಾಪುರ ತಹಶೀಲ್ದಾರ ಅವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿ ತಿಂಗಳು ಕಳೆದಿದೆ. ಆದರೆ ಚುನಾವಣೆಯ ದಿನಾಂಕ ಪ್ರಕಟಿಸದೆ ಸ್ಥಳೀಯ ಜನಪ್ರತಿನಿಧಿಗಳನ್ನು ಅಧಿಕಾರದಿಂದ ವಂಚಿಸಲಾಗಿದೆ ಎಂದು ಅಪಾದಿಸಿದ್ದಾರೆ.

Contact Your\'s Advertisement; 9902492681

ಕೋವಿಡ್ ನಿಯಂತ್ರಣದ ಲಾಕ್‍ಡೌನ್ ನೆಪವೊಡ್ಡಿ ಜಿಲ್ಲಾಡಳಿತ ಪುರಸಭೆ ಅಧ್ಯಕ್ಷ-ಉಪಧ್ಯಕ್ಷ ಚುನಾವಣೆ ಮುಂದೂಡುತ್ತಿದೆ. ಆದರೆ ರಾಜ್ಯದಲ್ಲಿ ಶಾಸಕರು ಮಂತ್ರಿಗಳಾಗುತ್ತಿದ್ದಾರೆ. ಪಕ್ಷದ ಮುಖಂಡರುಗಳು ವಿಧಾನ ಪರಿಷತ್ ಸದಸ್ಯರಾಗುತ್ತಿದ್ದಾರೆ. ಮಂತ್ರಿಮಂಡಲ ವಿಸ್ತರಣೆಯೂ ಆಗುತ್ತಿದೆ. ಇದಕ್ಕೆಲ್ಲ ಕೊರೊನಾ ಲಾಕ್‍ಡೌನ್ ಅಡ್ಡಿಯಾಗುತ್ತಿಲ್ಲ. ಸ್ಥಳೀಯ ಸಂಸ್ಥೆಯ ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರ ನೀಡುವಲ್ಲಿ ಕೋವಿಡ್ ನೀಯಮಗಳು ಅಡ್ಡಿಯಾಗುತ್ತಿವೆ ಎಂದು ಟೀಕಿಸಿರುವ ಶರಣಪ್ಪ ವಾಡೇಕರ್, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಸಂಸದ ಡಾ.ಉಮೇಶ ಜಾಧವ ಅವರಿಗೂ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯ ಮತದಾರರಾಗಿದ್ದು, ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಸ್ಥಳೀಯ ಚುನಾಯಿತ ಸದಸ್ಯರ ರಾಜಕೀಯ ಅಧಿಕಾರದ ಹಕ್ಕು ಕಸಿಯುತ್ತಿದ್ದಾರೆ. ಪರಿಣಾಮ ಪಟ್ಟಣ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿನ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ.

ಸಣ್ಣಪುಟ್ಟ ಕೆಲಸಗಳಿಗೂ ಎಸಿ-ಡಿಸಿ ಕಡೆ ಬೊಟ್ಟು ತೋರಿಸಲಾಗುತ್ತಿದೆ. ಕೂಡಲೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆÉೂಂದು ವಾರದ ಒಳಗಾಗಿ ಚುನಾವಣಾ ದಿನಾಂಕ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ದಲಿತ ರಕ್ಷಣಾ ವೇದಿಕೆಯ ಮುಖಂಡರಾದ ವಿಶಾಲ ಮಾನೆ, ಶ್ರೀನಾಥ ಅರಶಣಗೀಕರ್, ಮಿಥುನ್ ಛಲವಾದಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here