ಸುರಪುರ: ಮಾಜಿ ಸಚಿವ, ಸುರಪುರದ ಸಾಹಿತ್ಯಕ, ಸಾಂಸ್ಕೃತಿಕ ರಾಯಭಾರಿ ಯಾಗಿದ್ದ ರಾಜಾ ಮದನಗೋಪಾಲ ನಾಯಕ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರಿಯೆ 27-7-2020ರಂದು ಸಂಜೆ 4 ಗಂಟೆಗೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಶೆಳ್ಳಗಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಲೆ, ಸಾಹಿತ್ಯ, ಸಂಗೀತದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಇವರ ನಿಧನದಿಂದಾಗಿ ಸಾಂಸ್ಕೃತಿಕ ಲೋಕ ಬಡವಾಗಿದೆ.