ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಆಯ್ಕೆಯಾಗಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದನೆ ತಿಳಿಸಿದ್ದಾರೆ.
ದತ್ತಾತ್ರೇಯ ಪಾಟೀಲ ರೇವೂರ ಮತ್ತು ರಾಜಕುಮಾರ ಪಾಟೀಲ ಇಬ್ಬರೂ ಯುವಕರಾಗಿದ್ದು ಅತ್ಯಂತ ಕ್ರಿಯಾಶೀಲರಾಗಿದ್ದಾರೆ ಇವರ ನೇತೃತ್ವದಲ್ಲಿ ಎರಡು ಮಂಡಳಿಗಳು ಹೊಸ ದಿಕ್ಕು ಪಡೆದು ಅಭಿವೃದ್ಧಿ ಹೊಂದಲಿ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ತಮಗೆ ನೀಡುವ ಯಾವ ಜವಾಬ್ದಾರಿಯನ್ನು ಹೊರಲು ಸಿದ್ಧನಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಶ್ರಮಿಸುತ್ತೇನೆ. ಆಳಂದ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಯೋಜನೆ ರೂಪಿಸಿದ್ದೇನೆ. ಭಾರತೀಯ ಜನತಾ ಪಕ್ಷ ಶಿಸ್ತಿನ ಪಕ್ಷವಾಗಿದ್ದು ಅಲ್ಲಿ ಕಾರ್ಯಕರ್ತರಿಂದ ನಾಯಕರವರೆಗೆ ಶಿಸ್ತು ಕಲಿಸಲಾಗುತ್ತದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಹೈಕಮಾಂಡ್ ಯಾವತ್ತೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ಇತ್ತಿಚೀಗೆ ರಾಜ್ಯಸಭೆ ಮತ್ತು ವಿಧಾನ ಪರಿಷತಗೆ ಆಯ್ಕೆಯಾದ ಅಭ್ಯರ್ಥಿಗಳೇ ನಿದರ್ಶನ ಎಂದು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…