ಬಿಸಿ ಬಿಸಿ ಸುದ್ದಿ

ರಾಜಾ ಮದನಗೋಪಾಲ ನಾಯಕರ ನಿಧನಕ್ಕೆ ಸುರಪುರ ಜನತೆ ಶೋಕಾಚರಣೆ

ಸುರಪುರ : ಕೊರೊನಾ ಎಂಬ ಮಹಾಮಾರಿ ಇಡೀ ಜಗತ್ತನ್ನೆ ಬಾಧಿಸುತ್ತಿರುವ ಸಂದರ್ಭದಲ್ಲಿಯೆ ಕರ್ನಾಟಕ ಸರಕಾರದ ಮಾಜಿ ಸಚಿವರು ಹಾಗು ಸಗರ ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದೇ ಜನರಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ ಹಿರಿಯ ರಾಜಕಾರಣಿ ಹಾಗು ಸುರಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾಗಿದ್ದ ರಾಜಾ ಮದನಗೋಪಾಲ ನಾಯಕ ಅವರನ್ನು ಕೋವಿಡ್-೧೯ ಬಲಿ ಪಡೆದಿದೆ.

ಕಳೆದ ೨೩ನೇ ತಾರೀಖಿನಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದ ಇವರನ್ನು ಕಲಬುರ್ಗಿಯ ಇಎಸ್‌ಐ ಆಸ್ಪತ್ರೆಗೆ ಸೇರಿಸಲಾಗಿತ್ತು.ಸದಾಕಾಲ ಲವಲವಿಕೆಯಿಂದ ಹಾಗು ನಿತ್ಯವು ವ್ಯಾಯಾಮ ಮತ್ತು ಬ್ಯಾಡ್ಮಿಂಟನ್ ಆಡುತ್ತಾ ಸದೃಢ ಆರೋಗ್ಯವನ್ನು ಕಾಪಾಡಿಕೊಂಡಿದ್ದ ರಾಜಾ ಮದನಗೋಪಾಲ ನಾಯಕ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಸುದ್ದಿ ಕೇಳಿದ ಅನೇಕ ಜನರು ಆಶ್ವರ್ಯಪಟ್ಟಿದ್ದರಾದರು ಅವರ ಆರೋಗ್ಯವನ್ನು ಅರಿತ ಯಾರುಕೂಡ ಅವರನ್ನು ಕಳೆದುಕೊಳ್ಳುತ್ತಾರೆಂದು ಅಂದುಕೊಂಡಿರಲಿಲ್ಲ.ಆದರೆ ಸೋಮವಾರ ಬೆಳಿಗ್ಗೆ ೧೧ ಗಂಟೆಯ ವೇಳೆಗೆ ರಾಜಾ ಮದನಗೋಪಾಲ ನಾಯಕ ಅವರು ಕೊರೊನಾ ವೈರಸ್‌ನಿಂದ ಮೃತರಾದರೆಂಬ ಸುದ್ದಿ ತಿಳಿಯುತ್ತಿದ್ದಂತೆ ಸುರಪುರ ತಾಲೂಕಿಜ ಜನತೆ ದಿಗ್ಭ್ರಮೆಗೊಳಗಾಗಿದ್ದರು.

ರಾಜಾ ಮದನಗೋಪಾಲ ನಾಯಕ ಅವರು ೧೯೮೩ರಲ್ಲಿ ಕಾಂಗ್ಸೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ ೧೯೮೫ ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿದರು .ನಂತರ ೧೯೮೯ ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿ ವೀರಪ್ಪ ಮೋಯಿಲಿ ಅವರ ಸಂಪುಟದಲ್ಲಿ ಕೃಷಿಉತ್ಪನ್ನ ಮಾರುಕಟ್ಟೆ ಸಚಿವರಾಗಿದ್ದರು. ಇವರು ಆಗಿರುವ ಅನುದಾನದ ಕೊರತೆಯಲ್ಲಿಯೆ ಸುರಪುರ ಮತಕ್ಷೇತ್ರದಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದರು ಹಾಗೆ ಕೃಷಿ ಮಾರುಕಟ್ಟೆ ಸ್ಥಾಪನೆ,ನಗರಕ್ಕೆ ಒಳಚರಂಡಿ ವ್ಯವಸ್ಥೆ, ರಸ್ತೆಗಳು ಇನ್ನು ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದರು.
ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ಪಕ್ಷದಿಂದ ೨೦೦೪ ರಲ್ಲಿ ರಾಯಚೂರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ ೫೦೦ ಮತಗಳ ಅಂತರದಿಂದ ಸೋಲುನುಭವಿಸಿದರು. ೨೦೧೮ ರಲ್ಲಿ ಮರಳಿ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಿ ಸಕ್ರೀಯ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

 

ಸುರಪುರದ ಕನ್ನಡ ಸಾಹಿತ್ಯ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅನೇಕ ಸಾಹಿತಿಗಳ ಪುಸ್ತಕಗಳನ್ನು ಹೊರತರಲು ಪ್ರೋತ್ಸಾಹಿಸುತ್ತಿದ್ದರು ಇವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಜರುಗಿದವು ಹಾಗೆ ಮೂರನೆ ಜಿಲ್ಲಾ ಸಾಹಿತ್ಯ ಸಮ್ಮೇಳನವು ಸುರಪುರ ನಗರದಲ್ಲೆ ನಡೆಸಿ ಯಶ್‌ಸ್ವಿಗೊಳಿಸಿದ್ದರು. ಕ್ರೀಡೆ ಹಾಗೂ ಸಾಹಿತ್ಯ ಚಟುವಟಿಕೆಯಲ್ಲಿ ಹೆಚ್ಚಿನ ಆಸ್ತಕಿ ಹೊಂದಿದ್ದರು ಕ್ರೀಯಾಶೀಲರಾಗಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಸೇರಿ ಅಪಾರ ಆಭಿಮಾನಿಗಳು ಮತ್ತು ಬಂಧುಮಿತೃರನ್ನು ಅಗಲಿದ್ದಾರೆ.

ಶೋಕ ಸಂತಾಪ: ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಅವರ ನಿಧನಕ್ಕೆ ನಿಷ್ಠಿ ಕಡ್ಲೆಪ್ಪನವರ ಮಠದ ಶ್ರೀ ಪ್ರಭುಲಿಂಗ ಸ್ವಾಮೀಜಿ ಶಾಸಕ ರಾಜೂಗೌಡ, ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ,ಕೆಪಿಎಸ್‌ಸಿ ಸದಸ್ಯ ರಂಗರಾಜ ವನದುರ್ಗ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಿವಾಸ ಜಾಲವಾದಿ, ಬಸವರಾಜಪ್ಪ ಜಮದಾರಖಾನಿ, ಶಾಂತಪ್ಪ ಬೂದಿಹಾಳ, ದತ್ತಾತ್ರೇಯ ಗುತ್ತೆದಾರ, ಪ್ರಕಾಶ ಗುತ್ತೆದಾರ, ರಾಕೇಶ ಹಂಚಾಟೆ, ಜಿ.ಸಂಪತ್ತಕುಮಾರ, ಹಣಮಂತ್ರಾಯ ದೊರೆ, ಸಂತೋಶ, ರಾಜಶೇಖರ ದೇಸಾಯಿ,ಬೀರಣ್ಣ ಆಲ್ದಾಳ,ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಕುಂಬಾರ,ಸಾಹಿತಿ ರಾಘವೇಂದ್ರ ಹಾರಣಗೇರಾ ಮಲ್ಲಯ್ಯ ಇಟಗಿ ಸಂಗನಗೌಡ ಧನರಡ್ಡಿ ರಾಜನಕೊಳೂರ ಚಂದ್ರಕಾಂರ ಭಂಡಾರೆ ರುಕ್ಮಾಪುರ ಸೇರಿದಂತೆ ಅನೇಕರು ಶೋಕ ಸಂತಾಪ ವ್ಯಕ್ತ ಪಡಿಸಿದ್ದಾರೆ.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

1 hour ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

12 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

23 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

23 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago