ಸುರಪುರ: ಪತ್ರಕರ್ತ ಹಾಗೂ ಶರಣ ಸಾಹಿತಿ ವಿಶ್ವರಾಧ್ಯ ಸತ್ಯಂಪೇಟೆ ಅವರ ಮೇಲೆ ದಾಖಲಿಸಲಾದ ಮೊಕದ್ದಮೆಯನ್ನು ಹಿಂಪಡೆಯಬೇಕು ಹಾಗೂ ಪ್ರಗತಿಪರ ಮೇಲಿನ ದಬ್ಬಾಳಿಕೆ ಕಡಿವಾಣ ಹಾಕುವಂತೆ ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ತಹಸಿಲ್ ಕಚೇರಿ ಮುಂದೆ ಸೇರಿದ ಅನೇಕ ಜನ ಪ್ರತಿಭಟನಾಕಾರರು ಪತ್ರಕರ್ತ ವಿಶ್ವರಾಧ್ಯ ಸತ್ಯಂಪೇಟೆ ಅವರ ಮೇಲೆ ದಾಖಲಿಸಲಾದ ಅದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕ ಹೈಮದ್ ಪಠಾಣ್ ಮಾತನಾಡಿ, ವಿಶ್ವರಾಧ್ಯ ಸತ್ಯಂಪೇಟೆ ಅವರು ಈ ನಾಡು ಕಂಡ ವೈಚಾರಿಕ ನಿಲುವಿನ ಸಾಹಿತಿಯಾಗಿದ್ದು.ಸದಾಕಾಲ ಸತ್ಯ ಮತ್ತು ನ್ಯಾಯದ ಪರವಾಗಿ ತಮ್ಮ ಲೇಖನಿಯನ್ನು ಬಳಸುವವರು ಇಂತಹ ಸಮಾಜಮುಖಿ ಪತ್ರಕರ್ತನ ಮೇಲೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಯಲ್ಲಿ ವಿಶ್ವೇಶ್ವರಯ್ಯ ಸ್ವಾಮೀಜಿಯ ಕುರಿತು ವೈಚಾರಿಕವಾದ ಲೇಖನವನ್ನು ಬರೆದ ಕಾರಣದಿಂದ ಅವರ ಮೇಲೆ ಮೊಕದ್ದಮೆಯನ್ನು ದಾಖಲಿಸಲಾಗಿದೆ ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ. ಘಟನೆಯನ್ನು ಸಾಮೂಹಿಕ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಹಾಗೂ ಸರಕಾರ ಕೂಡಲೇ ಈ ಮೊಕದ್ದಮೆಯನ್ನು ರದ್ದುಪಡಿಸಬೇಕು ಮತ್ತು ರಾಜ್ಯದಲ್ಲಿನ ಪ್ರಗತಿಪರ ಮತ್ತು ವೈಚಾರಿಕ ಮೇಲೆ ನಡೆಯುವ ಇಂತಹ ದಬ್ಬಾಳಿಕೆಗಳಿಗೆ ಕಡಿವಾಣ ಹಾಕುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಯವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಅವರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರರಾದ ದೇವಿಂದ್ರಪ್ಪ ಪತ್ತಾರ್ ಮಾಳಪ್ಪ ಕಿರದಳ್ಳಿ ರಾಜು ಕುಂಬಾರ ನಿಂಗಣ್ಣ ಗೋನಾಲ್ ರಾಹುಲ್ ಹುಲಿಮನಿ ವಿಶ್ವನಾಥ ಹೊಸಮನಿ ಬಸವರಾಜ್ ಮುಷ್ಠಳ್ಳಿ ಕನಕಾಚಲ ಯಡಿಯಾಪೂರ ಹುಲಗಪ್ಪ ದೇವತ್ಕಲ್ ಮೌನೇಶ ಹುಣಸಿಹೊಳೆ ಮಾನಪ್ಪ ಶರಣು ತಳವಾಗರಗೇರಾ ಚಂದಪ್ಪ ಪಂಚಮ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…