ಬಿಸಿ ಬಿಸಿ ಸುದ್ದಿ

ವಿಶ್ವಾರಾಧ್ಯ ಸತ್ಯಂಪೇಟೆಯವರ ಮೇಲಿನ ಕೇಸ್ ಹಿಂಪಡೆಯುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಘಟಕದಿಂದ ಮನವಿ

ಕಲಬುರಗಿ : ಶರಣ ಚಿಂತಕ ಪತ್ರಕರ್ತ ವಿಶ್ವಾರಾಧ್ಯ ಸತ್ಯಂಪೇಟೆಯವರ ವಿರುದ್ಧ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ದಾಖಲಿಸಿರುವ ಕೇಸ್ ಹಿಂಪಡೆಯಬೇಕೆಂದು ಒತ್ತಾಯಿಸಿ ಜಾಗತಿಕ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಬುಧವಾರ ಮನವಿ ಸಲ್ಲಿಸಲಾಯಿತು.

ಸಗರ ನಾಡಿನ ಚಿಂತಕರು ಶರಣ ಸಾಹಿತಿಗಳಾದ ವಿಶ್ವಾರಾಧ್ಯ ಸತ್ಯಂಪೇಟೆಯವರ ಮೇಲೆ ದಾವಣಗೆರೆ ಜಿಲ್ಲೆಯ ಕೇ.ನಂ.೧೨೦-೨೦೨೦ ,೫೦೫೦ ಐ.ಪಿ.ಸಿ. ಕಲಂ ಅಡಿಯಲ್ಲಿ ಕೇಸ್ ದಾಖಲು ಮಾಡಿರುತ್ತಾರೆ. ಇದು ನಿಜಕ್ಕೂ ದುರುದ್ದೇಶ ಮತ್ತು ಪೂರ್ವಾಗ್ರಹ ದೋಷಪೂರಿತ ದೂರಾಗಿದೆ. ವಾಸ್ತವಾಗಿ ಇದರಲ್ಲಿ ಯಾವುದೆ ಹುರುಳಿಲ್ಲ. ಅದರಂತೆ ಸಿದ್ಧರಾಮ ಶಟಕಾರ ಅವರ ವಿರುದ್ಧವೂ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದನ್ನು ಬಲವಾಗಿ ಖಂಡಿಸಿದರು.

ಪ್ರಸ್ತುತವಾಗಿ ವಿಶ್ವಾರಾಧ್ಯ ಸತ್ಯಂಪೇಟೆ ರಾಜ್ಯ ಮಟ್ಟದ ಜಾಗತಿಕ ಲಿಂಗಾಯತ ಮಹಾಸಭೆಯ ಕಾರ್ಯದರ್ಶಿಯಾಗಿದ್ದು ನಾಡಿನಾದ್ಯಂತ ಬುದ್ದ ಬಸವ ಅಂಬೇಡ್ಕರ ಅವರ ತತ್ವಗಳನ್ನು ಮುಂದಿಟ್ಟುಕೊಂಡು ಪ್ರತಿಯೊಂದು ಸಮಾಜದವರನ್ನು ಸಮಾಜದಲ್ಲಿ ಕೂಡಿ ಬದಕಲು ಶ್ರಮವಹಿಸುತ್ತಿದ್ದಾರೆ. ಮತ್ತು ಸಾಕಷ್ಟು ಪ್ರಗತಿಪರವಾದ ಚಿಂತನಾತ್ಮಕ ಬರಹಗಳನ್ನು ಬರೆದು ಜನ ಸಾಮಾನ್ಯರಲ್ಲಿ ನೈಜ ಇತಿಹಾಸ ತಿಳಿಸಿ, ಸಂವಿಧಾನ್ಮಕವಾದ ಚಿಂತನೆಗಳನ್ನು ಬರಹಗಳ ಮೂಲಕ ವ್ಯಕ್ತ ಪಡಿಸಿ, ಜನ ಮೆಚ್ಚುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಕೆಲವರು ಇದನ್ನು ಹತ್ತಿಕ್ಕುವ ದೃಷ್ಟಿಯಿಂದ ಅವರ ಚಿಂತನೆಗಳನ್ನು ಮೂಲೆಗೆ ತಳ್ಳಬಯಸಿದ್ದಾರೆ. ಮೂಲಭೂತವಾದಿಗಳ ಕೆಂಗಣ್ಣು ಸತ್ಯಂಪೇಟೆಯವರ ಮೇಲೆ ಬಿದ್ದು ದೂರು ದಾಖಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹೊನ್ನಾಳಿಯ ರಾಂಪುರ ಮಠಾಧೀಶರ ಕುರಿತ ಅವೈಜ್ಞಾನಿಕ ನಿಲುವುಗಳನ್ನು ಖಂಡಿಸಿದ್ದರು. ಅವರು ಲಿಂಗೈಕ್ಯರಾದ ಸುದ್ದಿ ತಿಳಿದು ವಿಷಾದ ಕೂಡ ವ್ಯಕ್ತಪಡಿಸಿದ್ದರು. ಇದು ಅಲ್ಲಿಗೆ ಮುಗಿಯುವ ವಿಷಯವಾಗಿತ್ತು. ಅವರ ಬರಹದಲ್ಲಿ ಯಾವುದೇ ನಂಜು, ದ್ವೇಷ ಇರಲಿಲ್ಲ. ಆದರೆ ಬಸವಣ್ಣನವರ ವಿಚಾರಗಳನ್ನು ಪ್ರಚುರಪಡಿಸುವ ಇಂತಹ ಪ್ರಗತಿಪರರು ಮತ್ತು ಬಸವಭಕ್ತರ ವಿರುದ್ಧ ಆಗಾಗ ಕೇಸ್ ಹಾಕುವ ಮೂಲಕ ಸಮಾಜದಲ್ಲಿ ಶಾಂತಿ ಕದಡುತ್ತಿರುವುದು ದುರಂತದ ಸಂಗತಿಯಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ರಾಂಪುರದ ಶ್ರೀ ವಿಶ್ವೇಶ್ವರಯ್ಯ ಅವರ ಕುರಿತು ಸೈದ್ಧಾಂತಿಕವಾಗಿ ಬರೆದ ಬರಹವನ್ನು ಅನಾವಶ್ಯಕವಾಗಿ ದೊಡ್ಡದು ಮಾಡಿ ಗೊಂದಲ ಎಬ್ಬಿಸುತ್ತಿದ್ದಾರೆ. ವಿಶ್ವಾರಾಧ್ಯ ಸತ್ಯಂಪೇಟೆಯವನ್ನು ಪೇಚಿಗೆ ಸಿಲುಕಿಸಿ ಸಾಮಾಜಿಕ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ಸರಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ದಾಖಲಾಗಿರುವ ಕೇಸ್ ವಾಪಾಸ್ ಪಡೆಯಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗುತ್ತದೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಪ್ರಭುಲಿಂಗ ಎಸ್. ಮಹಾಗಾಂವಕರ್, ಪ್ರಧಾನ ಕಾರ್ಯದರ್ಶಿ ಆರ್. ಜಿ. ಶೆಟಗಾರ, ಕೋಶಾಧ್ಯಕ್ಷ ಬಸವರಾಜ ಮೊರಬದ, ಅಯ್ಯನಗೌಡ ಪಾಟೀಲ, ಶಿವಶರಣ ದೇಗಾಂವ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಅಶೋಕ ಘೂಳಿ, ಶಶಿಕಾಂತ ಪಸಾರ, ಧನರಾಜ ತಾಂಬೋಳೆ, ಸಿದ್ರಾಮಪ್ಪ ಲದ್ದೆ, ಚಂದ್ರಕಾಂತ ಪಾಟೀಲ, ಜಗದೀಶ ಪಾಟೀಲ, ಶ್ರೀಶೈಲ ಘೂಳಿ, ರಾಜಶೇಖರ ಯಂಕಂಚಿ, ರಮೇಶ ಧುತ್ತರಗಿ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

16 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago