ಬಿಸಿ ಬಿಸಿ ಸುದ್ದಿ

ಸುರಪುರ ತಹಶಿಲ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರ ಪ್ರತಿಭನಾ ಧರಣಿ

ಸುರಪುರ: ಈ ತಿಂಗಳ ೧೦ನೇ ತಾರೀಖಿನಿಂದ ಕೆಲಸ ನಿಲ್ಲಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿ ನಮ್ಮ ಬೇಡಿಕೆಗಳ ಈಡೇರಿಸಲು ಸರಕಾರಕ್ಕೆ ಪರಿ ಪರಿಯಾಗಿ ಬೇಡಿಕೊಂಡರು ನಮ್ಮ ಬೇಡಿಕೆಗಳನ್ನು ಈಡೇರಿಸದೆ ಮೊಂಡುತನ ಪ್ರದರ್ಶನ ಮಾಡುತ್ತಿದೆ.ಇದನ್ನು ರಾಜ್ಯ ಆಶಾ ಕಾರ್ಯಕರ್ತೆಯರು ಖಂಡಿಸುವುದಾಗಿ ತಾಲೂಕು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪುಷ್ಪಲತಾ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿನ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ನಗರದ ತಹಶಿಲ್ದಾರ ಕಚೇರಿ ಆವರಣದಲ್ಲಿ ಬುಧವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ನಡೆದ ಪ್ರತಿಭಟನಾ ಧರಣಿಯ ನೇತೃತ್ವ ವಹಿಸಿ ಮಾತನಾಡಿ,ಅನೇಕ ವಷಗಳಿಂದ ಕಡಿಮೆ ಗೌರವ ಧನದಲ್ಲಿ ಸೇವೆ ಮಾಡುತ್ತಿದ್ದೇವೆ ಈಗಲಾದರು ಸರ್ಕಾರ ನಮ್ಮ ಸೇವೆಯನ್ನು ಪರಿಗಣಿಸಿ ನಮ್ಮ ಬಹುದಿನಗಳ ಬೇಡಿಕೆಯಾದ ಮಾಸಿಕ ೧೨ ಸಾವಿರ ರೂಪಾಯಿ ಗೌರವಧನ ಹೆಚ್ಚಿಸಿ ಆದೇಶಿಸಬೇಕು ಈ ಕರೊನಾ ಸಮಯದಲ್ಲಿ ಪ್ರತಿ ಮನೆ, ಮನೆಗೂ ತೆರಳಿ ಜನರ ಮಾಹಿತಿ ಕಲೆಹಾಕಿದ್ದು ಮತ್ತು ಜನರಿಗೆ ಈ ವೈರಸ್ ತಗುಲದಂತೆ ಮುಂಜಾಗೃತೆ ವಹಿಸಲು ಅರಿವು ಮೂಡಿಸಲು ಹಾಗೂ ನಮ್ಮ ಆರೋಗ್ಯ ರಕ್ಷಣೆಗಾಗಿ ಸರಿಯಾದ ಕಿಟ್‌ಗಳನ್ನೂ ನೀಡಿಲ್ಲ. ಸ್ಯಾನಿಟೈಜರಾಗಲಿ, ಕರ ರಕ್ಷಾ ಕವಚಗಳಾಗಲಿ, ಮುಖಗವಸು, ಏನನ್ನು ನೀಡುತ್ತಿಲ್ಲ.

ಈಸಮಯವಂತೇನಲ್ಲ ಜನರ ಆರೋಗ್ಯದೃಷ್ಠಿಯಿಂದ ನಡೆಸುವ ಇನ್ನಿತರ ಯೋಜನೆಗಳನ್ನು ಜನರಗೆ ತಲುಪಿಸಲು ಮತ್ತು ಗರ್ಭೀಣಿ ಸ್ತ್ರೀಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಪೌಷ್ಠಿಕ ಆಹಾರ ಮತ್ತಿನಿತರ ವಿಷಯಗಳನ್ನು ಸದಾಕಾಲ ಹಗಲಿರುಳು ಎನ್ನದೆ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ ಆದರೆ ಸರ್ಕಾರ ನಮ್ಮ ಶ್ರಮಕ್ಕೆ ಬೆಲೆ ನೀಡುತ್ತಿಲ್ಲ ಈಗಲಾದರು ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಮ್ಮ ಬೇಡಿಕೆಗಳನ್ನು ಇಡೇರಿಸುವವರೆಗೂ ಅರ್ನಿಧಿಷ್ಠಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಾದ ಶಾಂತವ್ವ ಹಸನಾಪುರ, ಪ್ರೇಮಲತಾ, ತಾಯಮ್ಮ, ಶ್ರೀದೇವಿ, ಸುಜಾತ, ವಿಜಯಲಕ್ಷ್ಮೀ, ಬಸಮ್ಮ, ಹುಲಗಮ್ಮ, ಶಿವಕಾಂತಮ್ಮ, ದೇವಮ್ಮ, ಮರೆಮ್ಮ, ಚಂದಮ್ಮ, ಮಾನಮ್ಮ ಸೇರಿದಂತೆ ಐವತ್ತಕ್ಕೂ ಹೆಚ್ಚುಕಾರ್ಯಕರ್ತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago