ಬಿಸಿ ಬಿಸಿ ಸುದ್ದಿ

ಎಸ್/ಎಸ್ಟಿ ಪ್ರಕರಣದಲ್ಲಿ ತಾರತಮ್ಯ ಧೋರಣೆ: ಚಿಕ್ಕಪೇಟೆ ಎಸಿಪಿ ವಿರುದ್ದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದಲಿತ ವಿರೋಧಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನೀಡಿದ ದೂರಿನಲ್ಲಿ ತಾರತಮ್ಯ ಧೋರಣೆ ಹಾಗೂ ನಿರ್ಲಕ್ಷತೆ ತೋರಿಸಿದ್ದಾರೆ ಎಂದು ಚಿಕ್ಕಪೇಟೆ ವಿಭಾಗದ ಎಸಿಪಿ ಅವರ ವಿರುದ್ದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ ಸಿ ಎಸ್ ರಘು ಹಾಗೂ ಕೆ. ಅಯ್ಯಪ್ಪ ಚಳುವಳಿ ಅವರು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲ ತಾಣದಲ್ಲಿ ದಲಿತ ರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿತ್ತು. ಈಈ ಪ್ರಕರಣದಲ್ಲಿ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾನೂನು ಕೋಶದ ಸೂಚನೆ ಮೆರೆಗೆ ಒಂದು ತಿಂಗಳ ನಂತರ ದೂರು ದಾಖಲಿಸಲಾಗಿತ್ತು. ಎಫ್.ಐ.ಆರ್ ದಾಖಲಾದ ನಂತರವೂ ಆರೋಪಿಯು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವುದನ್ನು ಮುಂದುವರೆಸಿದ್ದ.

ಅದನ್ನು ಪ್ರಿಂಟ್ ಔಟ್ ಮುಖಾಂತರ ಮತ್ತೊಮ್ಮೆ ಜುಲೈ 22 ರಂದು ಎಸಿಪಿ ಅವರ ಗಮನಕ್ಕೆ ತರಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ನಗರದಿಂದ ಆರೋಪಿಯನ್ನು ಬಂಧಿಸಿ ಕರೆತರಲಾಗಿತ್ತು. ಆದರೆ, ಆ ಆರೋಪಿಯನ್ನು ನ್ಯಾಯಾಲಯಕ್ಕೂ ಹಾಜರು ಪಡಿಸದೆ ವಿಚಾರಣೆ ನೆಪದಲ್ಲಿ ಬಿಟ್ಟು ಕಳುಹಿಸಿದ್ದಾರೆ. ಸರಿಯಾಗಿ ತನಿಖೆ ನಡೆಸದೆ ಕರ್ತವ್ಯಲೋಪವೆಸಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ ಎಸ್ ರಘು ಹೇಳಿದರು.

ಈ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ ಅವರು ಈ ಬಗ್ಗೆ ಕ್ರಮ ಕೈಗೊಂಡು ಆರೋಪಿಗೆ ತಕ್ಕ ಶಿಕ್ಷೆಯನ್ನು ನೀಡಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಿ ಮಾನ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಸರಕಾರದ ಗಮನ ಸೆಳೆಯುವುದಾಗಿ ಎಚ್ಚರಿಕೆ ನೀಡಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

13 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

15 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

19 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

23 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

25 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

47 mins ago