ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ರವಿವಾರ ರಾತ್ರಿ ದಲಿತರು ಮದುವೆ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಏಕಾಏಕಿ ದಲಿತರ ಮೇಲೆ ಸವರ್ಣೀಯರು ಕಲ್ಲು ತೂರಾಟ ಮಾಡಿರುವ ಘಟನೆಯಲ್ಲಿ ಸುಮಾರು 16 ಜನ ಗಾಯಗೊಂಡ ಹಿನ್ನಲ್ಲೇಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಶಾಂತಪ್ಪ ಕುಡಲಗಿ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳಿಗೆ ಸಾಂತ್ವನ ಹೇಳಿದರು.
ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ನಾಗರಹಳ್ಳಿ ಗ್ರಾಮದಲ್ಲಿ ದಲಿತರು ಮೆರವಣೆ ನಡೆಸುತಿದ್ದಾಗ ಸವರ್ಣೀಯರು ಅವರ ಮೇಲೆ ನಡೆಸಿದ ಕಲ್ಲು ತೂರಾಟ ನಡೆದಿತ್ತು. ನಂತರ ರಾತ್ರಿ 11 ಗಂಟೆಗೆ ದಲಿತ ಓಣಿಗೆ ನುಗ್ಗಿ ಸವರ್ಣೀಯರು ಮತ್ತೆ ಕಲ್ಲು ತೂರಾಟ ನಡೆಸಿದರು ಎಂದು ಈ ಘಟನೆಯಲ್ಲಿ ಸುಮಾರು 25 ಜನ ದಲಿತರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ ದಲಿತ ಹಾಗೂ ಸವರ್ಣೀಯರನ್ನು ಸೇರಿ ಒಟ್ಟು 40 ಜನರನ್ನು ಪೊಲೀಸರು ಠಾಣೆಗೆ ಕರೆ ತಂದು ವಿಚಾರಿಸುತ್ತಿದ್ದಾರೆ ಎನ್ನಲಾಗಿದೆ. ಗ್ರಾಮದಲ್ಲಿ ಇನ್ನೂ ಬಿಗುವಿನ ವಾತಾವರಣ ಇದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…