ಕಲಬುರಗಿ: ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದ್ದು ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ನಡುವೆ ಗಾಯದ ಮೇಲೆ ಬರೆ ಎಳೆದಂತೆ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರದ ಎರಡನೆಯ ಕಂತು ನೀಡಲು ಕೇಂದ್ರ ಸರಕಾರ ನಿರಾಕರಣೆ ಮಾಡಿದೆ. ರಾಜ್ಯದಿಂದ ಆಯ್ಕೆಯಾಗಿ ಹೋದ 25 ಬಿಜೆಪಿ ಸಂಸದರಿಗೆ ಈ ಕುರಿತು ಪ್ರಶ್ನೆ ಮಾಡಲು ಧೈರ್ಯವಿಲ್ಲವೇ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಕಟುವಾಗಿ ಟೀಕೆಮಾಡಿದ್ದಾರೆ.
ತಮ್ಮ ಸರಣಿ ಟ್ವೀಟ್ ಮೂಲಕ ಕೇಂದ್ರ ಸರಕಾರದ ನಿಲುವನ್ನು ಖಂಡಿಸಿರುವ ಶಾಸಕರು ಜಿಎಸ್ ಟಿ ಪರಿಹಾರ ಮಾತ್ರವಲ್ಲದೇ, 15ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ 9,000 ಕೋಟಿ ರೂ. ಖೋತಾ ಮಾಡಿದೆ ಹಾಗೂ ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಕೂಡಾ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ ಇದು ರಾಜ್ಯದ ಅಭಿವೃದ್ದಿಗೆ ಅಡ್ಡಗಾಲಾಗಿ ಪರಿಣಮಿಸಿದೆ. ಇದನ್ನು ಪ್ರಶ್ನಿಸಬೇಕಿರುವ ಬಿಜೆಪಿಯವರು ಸುಮ್ಮನಿರುವುದೇಕೆ ? ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಯಾವೊಬ್ಬ ಸಂಸದರಿಗೆ ಇಲ್ಲವೇ? ಎಂದು ಕುಟುಕಿದ್ದಾರೆ.
ತಮ್ಮ ಸ್ಥಾನಮಾನ ಉಳಿಸಿಕೊಳ್ಳಲು “ದೆಹಲಿ ಪೆರೇಡ್” ಮಾಡುವ ಬಿಜೆಪಿ ನಾಯಕರಿಗೆ ರಾಜ್ಯದ ಹಕ್ಕಿಗಾಗಿ ಹೋರಾಡೋಕೆ ಪುರಸೊತ್ತಿಲ್ವಾ? ಎಂದು ಪ್ರಶ್ನಿಸಿರುವ ಶಾಸಕರು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ಸರ್ಕಾರ ಮತ್ತು ಬಿಜೆಪಿ ನಾಯಕರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಜರಿದಿದ್ದಾರೆ.
ಪ್ರಧಾನಿ ಮೋದಿಯರ ಆತ್ಮನಿರ್ಭರ ಹೇಳಿಕೆಯನ್ನು ಪ್ರಸ್ತಾಪಿಸಿ ಪ್ರಿಯಾಂಕ್ ಖರ್ಗೆ ಅವರು ” ನಮಗೆ ಸಲ್ಲಬೇಕಾದ ಹಣ ನೀಡದೇ, ರಾಜ್ಯವನ್ನ ಬೀದಿಯಲ್ಲಿ ಬಿಡುವುದೇ ಆತ್ಮನಿರ್ಭರತೆಯಾ ” ? ಎಂದು ವ್ಯಂಗ್ಯವಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…