ಆಳಂದ: ಹಲವು ಸವಾಲುಗಳ ನಡುವೆಯೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಒಂದು ವರ್ಷವನ್ನು ಪೂರೈಸಿ ಅತ್ಯಂತ ಉತ್ತಮ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದಲ್ಲಿ ಶನಿವಾರ ಮಂಡಲ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಒಂದು ವರ್ಷದ ಸರ್ಕಾರದ ಸಾಧನೆಯ ಕರಪತ್ರವನ್ನು ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಹಗಲು ರಾತ್ರಿ ಎನ್ನದೇ ರಾಜ್ಯದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ ಜನಾದೇಶ ಬಿಜೆಪಿಗೆ ಸಿಕ್ಕರೂ ಅಧಿಕಾರದ ದಾಹದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರ ರಚಿಸಿದ್ದವು ಆದರೆ ಜನತೆಯ ಆಶಯದಂತೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಹಲವು ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ದೇಶದಲ್ಲಿಯೇ ಉತ್ತಮ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.
ವಿರೋಧ ಪಕ್ಷಗಳು ಕೇವಲ ವಿರೋಧಕ್ಕಾಗಿ ವಿರೋಧ ಮಾಡುತ್ತಿವೆಯೇ ಹೊರತು ರಚನಾತ್ಮಕ ವಿರೋಧ ಮಾಡುತ್ತಿಲ್ಲ ಆ ಪಕ್ಷದ ಮುಖಂಡರಿಗೆ ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುವುದು ಅಭ್ಯಾಸವಾಗಿದೆ ಆದರೆ, ಸಧ್ಯದ ಪರಿಸ್ಥಿತಿಯಲ್ಲಿ ದೇಶದ ಮತ್ತು ರಾಜ್ಯದ ಜನತೆ ಕಾಂಗ್ರೆಸ್‌ನ್ನು ಪಾತಾಳಕ್ಕೆ ಕೊಂಡೊಯ್ಯಿದಿದ್ದಾರೆ ಮುಂದಿನ ದಿನಗಳಲ್ಲಿ ಆ ಪಕ್ಷಕ್ಕೆ ಭವಿಷ್ಯವಿಲ್ಲ ಕೇವಲ ತನ್ನ ಅಸ್ತಿತ್ವ ಪ್ರದರ್ಶಿಸಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದು ಟೀಕಿಸಿದರು.
ಒಂದು ವರ್ಷದಲ್ಲಿ ಸರ್ಕಾರ ನೊಂದವರ ಕಣ್ಣು ಒರೆಸುವ ಕಾರ್ಯ ಮಾಡಿದೆ ಜೊತೆಗೆ ನೆರೆ ಹಾವಳಿ, ಕೊರೋನಾದಂಥ ಹಾವಳಿಯನ್ನು ಸಮರ್ಥವಾಗಿ ಎದುರಿಸುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸಚಿವ ಸಂಪುಟ ಕಾರ್ಯಮಗ್ನವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ, ಪ್ರ. ಕಾರ್ಯದರ್ಶಿಗಳಾದ ಪ್ರಕಾಶ ಮಾನೆ, ಶರಣು ಕುಮಸಿ, ಮುಖಂಡ ಮಲ್ಲಣ್ಣ ನಾಗೂರೆ, ಪುರಸಭೆ ಸದಸ್ಯರಾದ ಸಂತೋಷ ಹೂಗಾರ, ಶ್ರೀಶೈಲ ಪಾಟೀಲ, ಚಂದ್ರಕಾಂತ ಹತ್ತರಕಿ, ರಾಜಕುಮಾರ ಸನ್ಮುಖ, ಸೋಮಶೇಖರ ಹತ್ತರಕಿ, ಮೃತ್ಯುಂಜಯ ಆಲೂರೆ, ಸಂದೀಪ ಪಾತ್ರೆ, ಮುಖಂಡರಾದ ಶ್ರೀಶೈಲ ಖಜೂರಿ, ಪ್ರಭಾಕರ ಘನಾತೆ, ಕಾಶಿನಾಥ ಪಾಟೀಲ, ಮಹಿಬೂಬ್ ಶೇಖ್, ಗುರು ಲಾವಣಿ, ಶರಣು ಕಾಳಕಿಂಗೆ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ನೇಮಕಕ್ಕೆ ಹರ್ಷ: ಬಿ ವೈ ವಿಜೇಯೆಂದ್ರ, ಪ್ರತಾಪಸಿಂಹ, ಮಾಲಿಕಯ್ಯ ಗುತ್ತೇದಾರ ಸೇರಿದಂತೆ ಇತರೆ ಮುಖಂಡರ ಸಂಘಟನಾ ಚಾತುರ‍್ಯವನ್ನು ಗುರುತಿಸಿ ಪಕ್ಷದ ವಿವಿಧ ಹುದ್ದೆಗಳಿಗೆ ನೇಮಕ ಮಾಡಿರುವುದಕ್ಕೆ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ. ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಮತ್ತಷ್ಟು ಬಲಗೊಳ್ಳಲಿ ಎಂದು ಆಶಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…