ಕಲಬುರಗಿ: ನಗರದ ಕೊಟನೂರು ಹತ್ತಿರದಲ್ಲಿ ನೂತನವಾಗಿ ನಿರ್ಮಿಸಿರು ವೀರಶೈವ ಮಹಿಳಾ ವಸತಿ ನಿಲಯದ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನಾ ಸಮಾರಂಭ ನೆರವೇರಿಸಲಿದ್ದಾರೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಯುವ ಘಟಕದ ಗೌರವಾಧ್ಯಕ್ಷರಾದ ಎಂ.ಎಸ್. ಪಾಟೀಲ್ ನರಿಬೋಳ ತಿಳಿಸಿದ್ದಾರೆ
ಸೋಮವಾರದಂದು ವೀರಶೈವ ಮಹಿಳಾ ವಸತಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿ ಕೊಂಡಿದ್ದು ಅಂದು ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪರಮಪೂಜ್ಯ ಶ್ರೀ ಡಾ. ಶರಣಬಸಪ್ಪ ಅಪ್ಪ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಶ್ರೀ ಸಿದ್ದಲಿಂಗ ಶಿವಾಚಾರ್ಯರು ಮುಗುಳನಾಗಾವಂ ವಹಿಸಲಿದ್ದು, ವಿಷೇಶ ಅತಿಥಿಗಳಾಗಿ ಪ್ರದೇಶ ಕಾಂಗ್ರೆಸ್ ಕಾರ್ಯಧ್ಯಕ್ಷ ಹಾಗೂ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಖ್ಯ ಅತಿಥಿಯಾಗಿ ಶಾಸಕರಾದ ಈಶ್ವರ್ ಖಂಡ್ರೆ ಅವರು ಆಗಮಿಸಲಿದ್ದಾರೆ. ದಕ್ಷಿಣ ಮತಕ್ಷೇತ್ರದ ಶಾಸಕರು ಮತ್ತು ನಿಗಮ ಮಂಡಳಿಯ ನಿಯೋಜಿತ ಅಧ್ಯಕ್ಷರಾದ ಅಪ್ಪುಗೌಡ ಪಾಟೀಲ್ ರೇವೂರ್ ಅವರ ಅಧ್ಯಕ್ಷತೆಯಲ್ಲಿ ಹಾಸ್ಟೆಲ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಶರಣಬಸಪ್ಪ ದರ್ಶನಾಪುರ ಅವರ ಉಪಸ್ಥಿತಿಯೊಂದಿಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರು ಹಾಗೂ ಮಾಜಿ ಮಹಾಪೌರಾದ ಡಾ. ಶರಣ್ ಕುಮಾರ್ ಮೋದಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಡಾ. ಶರಣ ಬಿ ಪಾಟೀಲ ಅವರ ನೇತೃತ್ವದಲ್ಲಿವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮಹಾಸಭೆಯ ಎಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಪದಾಧಿಕಾರಿಗಳ ಮಹಾಸಭೆಯ ಮಾಜಿ ಅಧ್ಯಕ್ಷರ ಸಹಕಾರದೊಂದಿಗೆ ಜಿಲ್ಲಾಡಳಿತದ ಮಾರ್ಗದರ್ಶನದಂತೆ ಕೋವಿಡ್-19 ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲವೇ ಕೆಲವು ಜನರು ಉಪಸ್ಥಿತಿಯ ಕಾರಣ ವೀರಶೈವ ಸಮಾಜದ ಮುಖಂಡರುಗಳಾದ ಹಾಲಿ ಮತ್ತು ಮಾಜಿ ಶಾಸಕರುಗಳು ಹಾಗೂ ವಿಧಾನಪರಿಷತ್ ಸದಸ್ಯರು ಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಸಂಕ್ಷಿಪ್ತವಾಗಿ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.