ಕಲಬುರಗಿ: ವೈಯಕ್ತಿಕ ಹಿತಾಸಕ್ತಿಗಿಂತ ಸಮಾಜದ ಹಿತವನ್ನೇ ಸದಾ ಬಯಸಿ ಸಮಾಜದ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಮೀಸಲಿಟ್ಟಿದ್ದ ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಲಿಂ.ಡಿ.ವಿ.ಪಾಟೀಲ ಅವರ ಹೆಸರನ್ನು ನಗರದ ದರಿಯಾಪುರ-ಕೋಟನೂರ ಲೇಔಟ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ವೀರಶೈವ ಮಹಿಳಾ ವಸತಿ ನಿಲಯಕ್ಕೆ ಹೆಸರಿಡುವ ಮೂಲಕ ಅವರ ಪ್ರಾಮಾಣಿಕ ಸೇವೆಯನ್ನು ಶಾಶ್ವತವಾಗಿ ಜೀವಂತವಾಗಿಡುವ ಕೆಲಸ ಮಾಡಬೇಕು ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕಾರ್ಯಾಧ್ಯಕ್ಷ ಶಿವರಾಜ ಎಸ್.ಅಂಡಗಿ ಮನವಿ ಮಾಡಿದ್ದಾರೆ.
ತಮ್ಮ ತ್ಯಾಗ ಮತ್ತು ಸೇವೆಯ ಮೂಲಕ ಸರ್ವ ಜನಾಂಗದ ಜನರಲ್ಲಿ ಉತ್ತಮ ಛಾಪು ಮೂಡಿಸಿದ್ದ ಲಿಂ.ಡಿ.ವಿ.ಪಾಟೀಲರು ಇಡೀ ಸಮಾಜವೇ ತಮ್ಮ ಕುಟುಂಬ ಎಂದು ಅಂದುಕೊಂಡು, ಸಮಾಜಕ್ಕಾಗಿ ತಮ್ಮ ಜೀವನವನ್ನೇ ಅರ್ಪಣೆ ಮಾಡಿಕೊಂಡರು. ಹಾಗಾಗಿ, ಅವರ ತ್ಯಾಗಮಯ ಬದುಕು ಇಂದಿನ ಸಮಾಜಕ್ಕೆ ಮಾದರಿ. ಲಿಂಗಾಯತರಿಗೆ ಡಿ.ವಿ.ಪಾಟೀಲರು ಧೈರ್ಯದ ನಿಧಿಯಂತೆ ಇದ್ದರು.
ಹಾಗಾಗಿ, ಅಂಥ ತ್ಯಾಗಮಯಿ ವ್ಯಕ್ತಿಯ ಹೆಸರನ್ನು ಮಹಿಳಾ ವಸತಿ ನಿಲಯಕ್ಕೆ ಇಡುವ ಮೂಲಕ ಲಿಂ.ಡಿ.ವಿ.ಪಾಟೀಲರ ಆತ್ಮಕ್ಕೆ ನಿಜವಾದ ಶಾಂತಿ ದೊರಕುತ್ತದೆ ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…