ತಳವಾರ ಮತ್ತು ಪರಿವಾರ ಜಾತಿಗಳಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುವಂತೆ ನಾಟಿಕಾರ ಆಗ್ರಹ

0
47

ಅಫಜಲಪೂರ: ಭಾರತ ಸಂವಿಧಾನದಲ್ಲಿ ಸಾಮಾಜಿಕ ರಾಜಕೀಯ ಆರ್ಥಿಕ ಶೈಕ್ಷಣಿಕವಾಗಿ ಹಿಂದುಳಿದ ಜನಗಳ ಅಭಿವೃದ್ಧಿಗಾಗಿ ಮೀಸಲಾತಿ ಎನ್ನುವ ವಿಶೇಷ ಪ್ರಾತಿನಿಧ್ಯ ನೀಡುವುದರ ಮುಖಾಂತರ ಆ ಜನಗಳನ್ನು ಮೇಲೆತ್ತುವ ಸಲುವಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮೀಸಲಾತಿಯ ಅವಕಾಶ ಕೊಟ್ಟಿದ್ದಾರೆ ಎಂದು ಯುವ ಮುಖಂಡರಾದ ಶಿವುಕುಮಾರ ನಾಟಿಕಾರ ರವರು ಜನ ಸಂಪರ್ಕ ಕಚೇರಿಯಲ್ಲಿ ನಡೆದ  ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

ಅದರಂತೆ ಕರ್ನಾಟಕ ರಾಜ್ಯದಲ್ಲಿ ರಾಜ್ಯ ಸರಕಾರವು ‘ಕೇಂದ್ರದ ಕರ್ನಾಟಕದ OBC ಪಟ್ಟಿಯಲ್ಲಿನ ಕ್ರ.ಸಂಖ್ಯೆ 6ರಲ್ಲಿ ಮತ್ತು ರಾಜ್ಯ ಸರ್ಕಾರದ OBC ಪಟ್ಟಿಯಲ್ಲಿನ ಕ್ರ.ಸಂಖ್ಯೆ 88 ನಲ್ಲಿ  ಇರುವ ತಳವಾರ ಪರಿವಾರ  ಜಾತಿಗಳು ಈಗಾಗಲೇ ಎಸ್ ಟಿ ಪಟ್ಟಿಯಲ್ಲಿ ಇರುವ ನಾಯಕ, ನಾಯ್ಕಡ ಜಾತಿಯ ಸಮಾನಾರ್ಥಕ ಪದಗಳು ಹಾಗಾಗಿ ಇವುಗಳನ್ನು ಎಸ್ ಟಿ ಗೆ ಸೇರಿಸಬೇಕೆಂದು ದಿನಾಂಕ 25-02-2014 ರಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

Contact Your\'s Advertisement; 9902492681

ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ ಅವರು 28-05-2020ರ ಅಧಿಸೂಚನೆಯಿಂದ ಉಂಟಾಗುವ ಸನ್ನಿವೇಶವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೊತೆ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಲಾಗುತ್ತದೆ ಅಲ್ಲಿಯವರೆಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ  ಮಾಡಬಾರದೆಂದು 28-05-2020ರ ಅಧಿಸೂಚನೆ ಹೊರಡಿಸುವ ಮೊದಲು ಈ ಹಿಂದೆ ಇದ್ದಂತೆ ಯಥಾ ಸ್ಥಿತಿ ಮುಂದುವರಿಸಿಕೊಂಡು ಹೋಗಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ತಳವಾರ ಪರಿವಾರ ಜಾತಿಗಳನ್ನು ಮತ್ತೆ ಪ್ರವರ್ಗ-1 ರಲ್ಲಿಯೇ ಸೇರಿಸಿ ಅಟಲ್ ಜಿ ಜನಸ್ನೇಹಿ ಕೇಂದ್ರದ ತಂತ್ರಾಂಶದಲ್ಲಿ ಬದಲಾವಣೆ ಮಾಡಿದ್ದಾರೆ.

ಇದರಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಕೇಂದ್ರ ಸರ್ಕಾರದ ಗೆಝೆಟ್ ಇದ್ದರೂ ಕೂಡ ಕಾನೂನು ಉಲ್ಲಂಘನೆ ಮಾಡಿ ತಳವಾರ ಪರಿವಾರ ಜಾತಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ.

ಆದ್ದರಿಂದ ರಾಜ್ಯ ಸರಕಾರ ಕೂಡಲೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಾಡಿರುವ ತಪ್ಪನ್ನು ಸರಿಪಡಿಸಿ ತಳವಾರ ಪರಿವಾರ ಜಾತಿಗಳಿಗೆ ನ್ಯಾಯ ಒದಗಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಕಾನೂನಾತ್ಮಕವಾಗಿ, ಪ್ರತಿಭಟನೆಗಳ ಮುಖಾಂತರ ರಾಜ್ಯ ಸರಕಾರದ ವಿರುದ್ಧ ಹೋರಾಟ ರೂಪಿಸಬೇಕಾಗುವುದೆಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here