ಕೋವಿಡ್-19 ನಿಯಂತ್ರಿಸುವಲ್ಲಿ ಕೇಂದ್ರ, ರಾಜ್ಯ ಸರಕಾರ ವಿಫಲ: ಶಾಸಕ‌ ಅಜಯ ಸಿಂಗ್

0
29

ಬೀದರ್: ಕೋವಿಡ್-19 ಮನಕುಲದ ಭೀಕರ ಸಂಕಷ್ಟಕ್ಕೆ ಕಾರಣವಾಗಿದ್ದು, ನಿಯಂತ್ರಿಸಲು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜೇವರ್ಗಿ ಶಾಸಕರಾದ ಡಾ.ಅಜಯ್ ಸಿಂಗ್  ಹೇಳಿದರು.

ಅವರು ಇಂದು ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಸಚಿವ ಶರಣ ಪ್ರಕಾಶ್ ಪಾಟೀಲ್ಅವರ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Contact Your\'s Advertisement; 9902492681

ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ನರಕ ಯಾತನೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಗಳ ಸಾಮಗ್ರಿಗಳಿಗೆ ರಾಜ್ಯ ಸರಕಾರದ ದುಬಾರಿ ದರಗಳ ಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು.

ಖರೀದಿ ಮಾಡಿರುವ ವೆಂಟಿಲೇಟರ್ ಗಳು ಕಳಪೆ ಗುಣಮಟ್ಟದಿಂದ ಕೂಡಿವೆ. ಮಾರುಕಟ್ಟೆಯ ದರಕ್ಕಿಂತ ನೂರಾರು ಪಟ್ಟು ದರಗಳಿಗೆ ಉಪಕರಣಗಳನ್ನು ಖರೀದಿ ಮಾಡಿ ರಾಜ್ಯ ಸರಕಾರ ಭ್ರಷ್ಟಾಚಾರ ನಡೆಸುತ್ತಿದೆ ಆರೋಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here