ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಐದು ಜನ ನಿಧನರಾಗಿರುವ ಬಗ್ಗೆ ಸೋಮವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರಗಿ ಎಂ.ಎಸ್.ಕೆ.ಮಿಲ್ ಪ್ರದೇಶದ ಮಿಸ್ಬಾ ನಗರದ 35 ವರ್ಷದ ಪುರುಷ (P-83296) ಜು.22 ರಂದು ಆಸ್ಪತ್ರೆಗೆ ದಾಖಲಾಗಿ ಆ.1 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಅಫಜಲಪೂರ ತಾಲೂಕಿನ ಕೋಗನೂರ ಗ್ರಾಮದ 58 ವರ್ಷದ ಪುರುಷ (P-105320) ಜು.25 ರಂದು ಆಸ್ಪತ್ರೆಗೆ ದಾಖಲಾಗಿ ಜು. 26 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ತಾರಫೈಲ್ ಪ್ರದೇಶದ 51 ವರ್ಷದ ಮಹಿಳೆ (P-105409) ಜು.22 ರಂದು ಆಸ್ಪತ್ರೆಗೆ ದಾಖಲಾಗಿ ಜು.23 ರಂದು ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಜಯನಗರದ 70 ವರ್ಷದ ವೃದ್ಧ (P-132150) ಜು.29 ರಂದು ಆಸ್ಪತ್ರೆಗೆ ದಾಖಲಾಗಿ ಜು.31 ರಂದು ನಿಧನ ಹೊಂದಿದ್ದಾರೆ.
ಐ.ಎಲ್.ಐ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿ ನಗರದ ನಿವಾಸಿ 65 ವರ್ಷದ ವೃದ್ಧ (P-133758) ಜು.28 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.