ಆಳಂದ; ಆ.೫ರಂದು ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿರುವುದರಿಂದ ಅಂದು ಶ್ರೀರಾಮನ ಅನುಯಾಯಿಗಳು ಮನೆಯಲ್ಲಿ ದೀಪ ಬೆಳಗಬೇಕೆಂದು ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಮನವಿ ಮಾಡಿದ್ದಾರೆ.
ಅಂದು ತಮ್ಮ ಮನೆಯ ಮುಂದೆ ರಂಗೋಲಿ ಹಾಕಿ, ತೋರಣ ಕಟ್ಟಿ, ಮನೆಯ ಮೇಲೆ ಭಗವಾ ಧ್ವಜ ಹಾರಿಸಬೇಕು. ಬೆಳಿಗ್ಗೆ ೯:೩೦ಕ್ಕೆ ಮನೆಯವರೆಲ್ಲರೂ ತಮ್ಮ ಮನೆಯ ದೇವರ ಕೋಣೆಯ ಮುಂದೆ ಕುಳಿತು ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಸುಗಮವಾಗಿ ಆಗಲೆಂದು ಸಂಕಲ್ಪ ಮಾಡಿ ೧೦೮ ಬಾರಿ ರಾಮನಾಮ ಜಪ ಪಠಿಸಿ, ಭಜನೆ ಮಾಡಲು ಕೋರಿದ್ದಾರೆ.
ಸಂಜೆ ೬ ಗಂಟೆಗೆ ತಮ್ಮ ತಮ್ಮ ಮನೆಗಳ ಮುಂದೆ ದೀಪಗಳನ್ನು ಹಚ್ಚಿ ಸಂಭ್ರಮಿಸಬೇಕೆಂದು ಆನಂದರಾವ ಪಾಟೀಲ ಕೊರಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…