ಕಲಬುರಗಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆ.5 ರಂದು ಶಿಲಾನ್ಯಾಸ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಲಬುರಗಿ ಜಿಲ್ಲೆಯಾದ್ಯಂತ ಆ.4ರ ಮಧ್ಯಾಹ್ನ 3 ರಿಂದ ಆ.6ರ ಬೆಳಿಗ್ಗೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿದಲ್ಲದೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.