ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್‍ಸೈಟ್ ವಿಳಾಸ http://adcl.karnataka.gov.in, , ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ವೆಬ್‍ಸೈಟ್ ವಿಳಾಸ http://adijambava.kar.nic.in, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ವೆಬ್‍ಸೈಟ್ ವಿಳಾಸ http://banjarathanda.kar.nic.in ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ವೆಬ್‍ಸೈಟ್ ವಿಳಾಸ http://ksskdc.kar.nic.in ವೆಬ್‍ಸೈಟ್‍ಗಳಿಗೆ ಸಂಪರ್ಕಿಸಬಹುದಾಗಿದೆ. ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 2020ರ ಆಗಸ್ಟ್ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08472 278660 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…