ಬಿಸಿ ಬಿಸಿ ಸುದ್ದಿ

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷ (2019ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ) ದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಎಂದು ಕಲಬುರಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪದಕ ವಿಜೇತರಾದ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿಯ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಲಬುರಗಿ ಕಚೇರಿಯಂದ ಪಡೆದು ಭರ್ತಿ ಮಾಡಿ ಇಲಾಖೆಯಿಂದ ದೃಢೀಕರಣ ಪಡೆದು http://karunadu.karnataka.gov.in/dyes ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ 2020ರ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹಾಕಿ ತರಬೇತುದಾರ ಸಂಜಯ ಬಾಣದ ಇವರ ಮೊಬೈಲ್ ಸಂಖ್ಯೆ 9844029235ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago