ಬಿಸಿ ಬಿಸಿ ಸುದ್ದಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 443ನೇ ರ್ಯಾಂಕ್ ಪಡೆದ ಸ್ಪರ್ಶಾ ನಿಲಂಗಿ ಸನ್ಮಾನ

ಕಲಬುರಗಿ: ಉನ್ನತ ಹುದ್ದೆಯ ಆಕಾಂಕ್ಷಿಗಳು ಮೊದಲು ತಮ್ಮಲ್ಲಿರುವ ಕೀಳರಿಮೆಯನ್ನು ತೊರೆದು, ಪ್ರಯತ್ನದಲ್ಲಿ ವಿಶ್ವಾಸವಿಟ್ಟು ನಿರಂತರವಾದ ಅಧ್ಯಯನಶೀಲ ಗುಣ, ಸಮಯ ಪ್ರಜ್ಞೆ, ಶಿಸ್ತು, ಯೋಜನಾಬದ್ದವಾದ ಕಾರ್ಯ, ಸಾಧಿಸಬೇಕೆಂಬ ಅಪ್ಪಟ ಛಲಗಾರಿಕೆಯಂತಹ ಗುಣಗಳನ್ನು ಮೈಗೂಡಿಸಿಕೊಂಡು ಸತತವಾಗಿ ಪ್ರಯತ್ನಿಸಿದರೆ ಖಂಡಿತವಾಗಿಯೂ ಉನ್ನತವಾದ ಸಾಧನೆ ಮಾಡಲು ಸಾಧ್ಯವಿದೆಯೆಂದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ೪೪೩ನೇ ರ‍್ಯಾಂಕ್ ಪಡೆದ ಸ್ಪರ್ಶ ನಿಲಂಗೆ ಅಭಿಮತ ವ್ಯಕ್ತಪಡಿಸಿದರು.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದರ ಪ್ರಯುಕ್ತ ’ಬಸವೇಶ್ವರ ಸಮಾಜ ಸೇವಾ ಬಳಗ’ವು ನಗರದ ಜೇವರ್ಗಿ ರಸ್ತೆಯ, ಗಣೇಶ ನಗರದಲ್ಲಿರುವ ಸಾಧಕಿಯ ಮನೆಯ ಪ್ರಾಂಗಣದಲ್ಲಿ ತಮಗೆ ಹಮ್ಮಿಕೊಂಡಿದ್ದ ಗೃಹ ಸನ್ಮಾನದಲ್ಲಿ ಸತ್ಕಾರ ಗೌರವವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ಯೋಜನಾಬದ್ಧ ಹಾಗೂ ಸೂಕ್ತ ಮಾರ್ಗದರ್ಶನದೊಂದಿಗೆ ದಿನಕ್ಕೆ ೮ ಗಂಟೆಗಳ ಕಾಲ, ಹತ್ತು ತಿಂಗಳು ದೆಹಲಿಯಲ್ಲಿದ್ದುಕೊಂಡು ನಾನು ಈ ಮೊದಲು ಅಭ್ಯಾಸ ಮಾಡಿ ೨೦೧೭ರ ಬ್ಯಾಚ್‌ನಲ್ಲಿ ೮೦೫ನೇ ರ‍್ಯಾಂಕ್ ಪಡೆದು ಐಆರ್‌ಎಸ್ ಹುದ್ದೆಗೆ ಆಯ್ಕೆಯಾಗಿ ಪ್ರಸ್ತುತ ಆಸ್ಸಾಂ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ನನಗೆ ಐಎಎಸ್ ಹುದ್ದೆಯ ಗುರಿಯಿರುವುದರಿಂದ ನನ್ನ ಕರ್ತವ್ಯದ ಜೊತೆಗೆ ಎರಡನೇ ಬಾರಿಗೆ ಪುನಃ ಪ್ರಯತ್ನಿಸಿ ಈ ಸಲ ೪೪೩ನೇ ರ‍್ಯಾಂಕ್ ಪಡೆದಿದ್ದೇನೆ. ಮೊದಲಿಗೆ ಯುಪಿಎಸ್‌ಸಿ ಪರೀಕ್ಷೆ ಕಠಿಣವೆನಿಸಿದರೂ ನಿರಂತರವಾಗಿ ಪ್ರಯತ್ನಿಸಿದರೆ ಸಾಧನೆಯ ದಾರಿ ಸರಳವಾಗುತ್ತಾ ಸಾಗುತ್ತದೆ. ಜನಸೇವೆ ಮಾಡಬೇಕು, ಬಡವರ ಕಷ್ಟಗಳಿಗೆ ಸ್ಪಂದಿಸಬೇಕೆಂಬ ಅಪ್ಪಟ ಬಯಕೆ ನನ್ನನ್ನು ನಿರಂತರವಾಗಿ ಪ್ರಯತ್ನಿಸುವಂತೆ ಮಾಡಿದೆ. ಕಲಬುರಗಿ ಜಿಲ್ಲೆಯ ಎಲ್ಲರ ಸಹಕಾರ, ಹಾರೈಕೆಗಳನ್ನು ನಾನು ಮರೆಯುವಂತಿಲ್ಲವೆಂದು ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದರು.

ಸಾಧಕಿ ಸ್ಪರ್ಶಾ ಅವರಿಗೆ ಸತ್ಕರಿಸಿ ಆಶೀರ್ವಚನ ನೀಡಿದ ಮಕ್ತಂಪುರ ಗುರುಬಸವ ಮಠದ ಪೂಜ್ಯ ಶಿವಾನಂದ ಶ್ರೀಗಳು, ನಮ್ಮ ಭಾಗದಲ್ಲಿ ಪ್ರತಿಭೆಗಳ ಕೊರತೆಯಿಲ್ಲ. ಅವರನ್ನು ಗುರುತಿಸಿ, ಅವರಿಗೆ ಸೂಕ್ತವಾದ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿದರೆ, ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ಸಾಧ್ಯವಿದೆಯೆಂಬುದಕ್ಕೆ ಸ್ಪರ್ಶಾ ಅವರೇ ಸಾಕ್ಷಿಯಾಗಿದ್ದಾರೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಸಂಸ್ಥಾಪಕ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ವಿದ್ಯಾರ್ಥಿಗಳಲ್ಲಿ ಸದಾ ಧನಾತ್ಮಕ ಚಿಂತನೆ ಇರಬೇಕು.  ಮನುಷ್ಯನಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಬಾಲ್ಯದಲ್ಲಿಯೇ ಗುರಿಯನ್ನು ನಿರ್ಧರಿಸಿ, ಅದಕ್ಕೆ ನಿರಂತರ ಪ್ರಯತ್ನ ಪಟ್ಟಿದ್ದೆಯಾದರೆ, ಉನ್ನತವಾದ ವ್ಯಕ್ತಿಗಳಾಗಿ ಹೊರಹೊಮ್ಮಬಹುದು. ಸಾಧನೆಗೆ ಅಶಾಧ್ಯವಾದದ್ದು ಯಾವುದು ಇಲ್ಲ. ಸಾಧಿಸುಮ ಛಲಗಾರಿಕೆಯ ಮನಸ್ಸು ಮುಖ್ಯವೆಂದು ನುಡಿದರು.

ಕಾರ್ಯಕ್ರಮದಲ್ಲಿ ಚಂದ್ರಕಾಂತ ಬಿರಾದಾರ, ಅಣ್ಣಾರಾಯ ಮಂಗಾಣೆ, ಬಸಯ್ಯಸ್ವಾಮಿ ಹೊದಲೂರ,ಬಸವರಾಜ ಎಸ್.ಪುರಾಣೆ, ದೇವೇಂದ್ರಪ್ಪ ಗಣಮುಖಿ, ರೇಣುಕಾಚಾರ್ಯ ಸ್ಥಾವರಮಠ, ಸಂಜೀವಕುಮಾರ ಪಾಟೀಲ, ಮಲ್ಲಿಕಾರ್ಜುನ ಕಾಖಂಡಕಿ, ಶ್ರೀಗಣೇಶ ಸ್ಥಾವರಮಠ, ಕುಟುಂಬಸ್ಥರಾದ ಪಾರ್ವತಿ ನಿಲಂಗಿ, ಅನೀಲ ನಿಲಂಗಿ, ದೀಪಾ ಹೊಸೂರ, ಭವಾನಿ ಹೊಸೂರ ಸೇರಿದಂತೆ ಮತ್ತಿತರರಿದ್ದರು.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

5 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

7 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

7 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

7 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

7 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

7 hours ago