ಹೈದರಾಬಾದ್ ಕರ್ನಾಟಕ

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಚಾರ್ಯರಾದ ಎಸ್.ಬಿ.ಪಾಟೀಲ ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ http://dtetech.karnataka.gov.in/kartechnical ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ www.cetonline.karnataka.gov.in/keaವೆಬ್‍ಸೈಟ್‍ದಿಂದ ಡೌನ್‍ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಮಾಹಿತಿ ಪುಸ್ತಕದಲ್ಲಿ ತಿಳಿಸಿರುವ ಸೂಚನೆಯಂತೆ ಆನ್‍ಲೈನ್ ಮೂಲಕ 2020ರ ಆಗಸ್ಟ್ 6 ರಿಂದ ಆಗಸ್ಟ್ 22 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು ಅಥವಾ ವಿದ್ಯಾರ್ಥಿಗಳು ತಮ್ಮ ಸಮೀಪದ ಯಾವುದೇ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್ ಸಹಾಯ ಕೇಂದ್ರದಲ್ಲಿ ಸಿಬ್ಬಂದಿಗಳ ಸಹಕಾರದೋಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಸಂದÀರ್ಭದಲ್ಲಿ ಎಸ್.ಎಸ್.ಎಲ್.ಸಿ. /ತತ್ಸಮಾನ ಅಂಕಪಟ್ಟಿ ಅಥವಾ Statement of Marks, ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್.ಡಿ ನಂಬರ್., ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣಪತ್ರ, ಗ್ರಾಮೀಣ ವ್ಯಾಸಂಗ ಪ್ರಮಾಣಪತ್ರ, ವಿಶೇಷ ಮೀಸಲಾತಿ ಕೋಟಾದ ಪ್ರಮಾಣಪತ್ರ ಹಾಗೂ ಹೈದ್ರಾಬಾದ್ – ಕರ್ನಾಟಕ (ಕಲ್ಯಾಣ ಕರ್ನಾಟಕ) ಮೀಸಲಾತಿ ಪ್ರಮಾಣಪತ್ರಗಳ ದಾಖಲಾತಿಗಳನ್ನು ಅಪ್‍ಲೋಡ್ ಸಲ್ಲಿಸಬೇಕು.

ಎಸ್.ಸಿ., ಎಸ್.ಟಿ., ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 50 ರೂ.ಹಾಗೂ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ 100 ರೂ.ಗಳ ಅರ್ಜಿ ಶುಲ್ಕ ಇರುತ್ತದೆ. ಆಯ್ಕೆಯಾದ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕದೊಂದಿಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.

ಪ್ರಸಕ್ತ ಸಾಲಿನಿಂದ ಅರ್ಜಿ ಮತ್ತು ಮಾಹಿತಿ ಪುಸ್ತಕವನ್ನು 129 ಸಹಾಯ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿಲ್ಲ. ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್ ಕಚೇರಿ ದೂರವಾಣಿ ಸಂಖ್ಯೆ 08472-221871 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago