ಕೊರೋನಾ ಸೋಂಕಿನಿಂದ ಕಲಬುರಗಿಯಲ್ಲಿ‌ ಮತ್ತೆ 4 ಜನ ಸಾವು

0
56

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 4 ಜನ ನಿಧನರಾಗಿರುವ ಬಗ್ಗೆ ಬುಧವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 117ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಐ.ಎಲ್.ಐ.ಜೊತೆಗೆ ಹೃದಯ ರೋಗದಿಂದ ಬಳಲುತ್ತಿದ್ದ ಶಹಾಬಾದ ಪಟ್ಟಣದ ರಾಮ ಮೋಹಲ್ಲಾ ಪ್ರದೇಶದ 54 ವರ್ಷದ ಪುರುಷ (P-82721) ಜು. 20 ರಂದು ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

Contact Your\'s Advertisement; 9902492681

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಚಿತ್ತಾಪುರ ಪಟ್ಟಣದ ಸ್ಟೇಷನ್ ಪ್ರದೇಶದ 66 ವರ್ಷದ ವೃದ್ಧ (P-113304) ಜು. 27 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಗಂಜ್ ಪ್ರದೇಶದ 82 ವರ್ಷದ ಪುರುಷ (P-133700) ಜು. 26 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಅಬೂಬಕರ್ ಕಾಲೋನಿಯ 48 ವರ್ಷದ ಮಹಿಳೆ (P-141888) ಜು. 29 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here