ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ಸಾಲಿನಲ್ಲಿ ಮತ್ತೆ ಹೊಸ ನಿಯಮಾವಳಿಯಲ್ಲಿ ಮೀಸಲಾತಿ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲು ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಿಗೆ ಕಾರ್ಯಭಾರವನ್ನು ಕಳಿಸಿಕೊಡಲು ಕುಲಸಚಿವರು ಆದೇಶ ಹೊರಡಿಸಿದ್ದು, ವಿವಿ ಅತಿಥಿ ಉಪನ್ಯಾಸಕರ ಒಕ್ಕೂಟದ ಖಂಡಿಸಿದೆ.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಲ್ಲಿ ರೋಸ್ಟರ್ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಆಯ್ಕೆ ಮಾಡಿಕೊಳ್ಳವ ಬಗ್ಗೆ ಅವಕಾಶ ನೀಡಿಲ್ಲ. ಗುಲ್ಬರ್ಗಾ ವಿವಿ ಅವೈಜ್ಞಾನಿಕ ನಿಯಮ ರೂಪಿಸಿರುವುದ ಖಂಡನೀಯವಾಗಿದೆ ಎಂದು ಒಕ್ಕೂಟದ ಅಧ್ಯಕ್ಷರಾದ ಡಾ. ವಿದ್ಯಾಧರ್ ನಾಗನಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ನಿಯಮದಿಂದ ಅನಾನುಕೂಲಗಳು ಹೆಚ್ಚಾಗಿದ್ದು, ಪ್ರತಿವರ್ಷದಂತೆ ಈ ವರ್ಷವೂ ಅತಿಥಿ ಉಪನ್ಯಾಸಕರನ್ನು ಮುಂದುವರಿಸಬೇಕೆಂದು ಕುಲಪತಿಗಳಿಗೆ ಭೇಟಿ ನೀಡಿ ಮನವಿ ಮಾಡಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಅತಿಥಿ ಉಪನ್ಯಾಸಕರ ಒಕ್ಕೂಟದ ಅಧ್ಯಕ್ಷರಾದ ಡಾ. ಶಶಿಧರ ಮೇಳಕುಂದೆ, ಡಾ. ಶಿವುಕುಮಾರ ಸಂಗನ, ಡಾ. ವಿಜಯಕುಮಾರ ಬೀಳಗಿ, ಮತ್ತು ಡಾ. ಸುನೀಲ ಜಾಬಾದಿ, ರಾಜು ಕಟ್ಟಿಮನಿ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…