ಬಿಸಿ ಬಿಸಿ ಸುದ್ದಿ

ಕೊರೊನಾಗೆ ಆರೋಗ್ಯ ಸಿಬ್ಬಂದಿ ಬಲಿ

ಕಲಬುರಗಿ: ಮಹಾಮಾರಿ ಕೊರೊನಾಕ್ಕೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಯಳಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕ ರವಿಕುಮಾರ ನರಸಪ್ಪ (46) ಇಂದು ಮುಂಜಾನೆ ಕೊನೆ ಉಸಿರು ಎಳೆದಿದ್ದಾರೆ.

ಯಳಸಂಗಿ ಆರೋಗ್ಯ ಕೇಂದ್ರದಲ್ಲಿ ಕಳೆದ 10 ವರ್ಷದಿಂದ ಗುತ್ತಿಗೆ ನೌಕರನಾಗಿ ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಹೊರಾಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದರು. ಕಳೆದ ಒಂದು ವಾರದ ಹಿಂದೆ ಎಲ್ಲಾ ಆರೋಗ್ಯ ಸಿಬ್ಬಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು ಆಗ ಇವರಿಗೆ ಪಾಜಿಟಿವ ಬಂದಿತ್ತು.  ಹೀಗಾಗಿ ಇವರನ್ನು ವೈದ್ಯರು ಕಲಬುರಗಿ ಜಿಮ್ಸಗೆ ಚಿಕಿತ್ಸೆಗೆ ದಾಖಲಿಸಿಲಾಗಿತ್ತು.  ಆದರೆ ಅಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಆದರೆ ಜಿಮ್ಸಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಇರುವುದರಿಂದ ಅವರನ್ನು ಕಲಬುಗರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗದೆ ಆದರೆ ಕಳೆಡದ ಎರಡು ದಿನದ ಹಿಂದೆ ತಿವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಇಂದು ಗುರುವಾರ ಮುಂಜಾನೆ ಕೊನೆ ಉಸಿರು ಎಳೆದಿದ್ದಾರೆ.

ತಾಯಿ ಪತ್ನಿ ಇಬ್ಬರು ಪುತ್ರರು ಇಬ್ಬರು ಪುತ್ರಿಯನ್ನು ಅಗಲಿದ್ದ, ಕುಟುಂಬಕ್ಕೆ ಆಧಾರವಾಗಿದ್ದ ಇವರ ಅಗಲಿವಿಕೆಯಿಂದ ಇಡಿ ಕುಟುಂಬ ಅನಾಥವಾಗಿದೆ ಸರಕಾರ ಕೊರೊನಾ ಹೋರಾಟದಲ್ಲಿ ಭಾಗಿಯಾಗಿ ಅದೆ ಕೊರೊನಾಕ್ಕೆ ಬಲಿಯಾದ ಮೊದಲ ಆರೋಗ್ಯ ಸಿಬ್ಬಂದಿ ಇವರಾಗಿದ್ದಾರೆ.

ಜೀವ ಕಾಪಾಡುವ ಜೀವಕ್ಕೆ ರಕ್ಷಣೆ ಇಲ್ಲದಾಗಿದ್ದು ಸರಕಾರ ಇದನ್ನು ಗಂಭಿರವಾಗಿ ಪರಿಗಣಿಸಿ ಇವರ ಕುಟುಂಬಕ್ಕೆ ವಿಮೆ ನೀಡಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

3 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

3 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

5 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

5 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

5 hours ago