ಮನೆಬಾಗಿಲಿಗೆ ಮದ್ಯ ಪೂರೈಕೆ ವಿಚಾರ: ಮಾಜಿ ಸಿಎಂ ಕುಮಾರ ಸ್ವಾಮಿ ಟೀಕೆ

0
39

ಬೆಂಗಳೂರು: ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ರಾಜ್ಯ ಸರಕಾರ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ಟ್ವೀಟರ್ ಖಾತಿಯಲ್ಲಿ ಆಗ್ರಹಿಸಿದ್ದಾರೆ.

ಲಾಕ್‌ ಡೌನ್‌ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ದೈನಂದಿನ ಜೀವನಕ್ಕೆ ಕಷ್ಟಪಡುವ ಈ ಸಂದರ್ಭದಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

“ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ ‘ಮನೆ ಬಾಗಿಲಿಗೆ ಮದ್ಯ’ ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here