ಕಾರ್ಮಿಕರ ಸುರಕ್ಷತೆಗೆ ಒತ್ತು ನೀಡಿ: ಸಚಿವ ಜಗದೀಶ್‌ ಶೆಟ್ಟರ್‌

0
60

ಬಿಡದಿ: ಕರೋನಾ ಸಾಂಕ್ರಾಮಿಕ ಪಿಡುಗಿನಿಂದ ಕಾರ್ಮಿಕರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಬೃಹತ್‌ ಮತ್ತು ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್‌ ಹೇಳಿದರು.

ಅವರು ಇಂದು ಬಿಡದಿಯ ಕೋಕೊ ಕೋಲಾ ಫ್ಯಾಕ್ಟರಿಗೆ ಭೇಟಿ ನೀಡಿ ಮಾತನಾಡಿದರು. ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರ ಹಾಗೂ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ದೇಶ ಹಾಗೂ ರಾಜ್ಯದ ಆರ್ಥಿಕತೆಯ ಗಾಲಿ ಮುಂದೆ ಸಾಗಲು ಕೈಗಾರಿಕಾ ಕ್ಷೇತ್ರದ ತನ್ನ ಕಾರ್ಯ ಆರಂಭ ಮಾಡಬೇಕಾಗಿರುವುದು ಅನಿವಾರ್ಯ. ಇದನ್ನು ಮನಗೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಲಾಕ್‌ ಡೌನ್‌ ಸಡಲಿಕೆ ಮಾಡಿದೆ. ಆದರೆ, ಕರೋನಾ ಮಹಾಮಾರಿಯ ತೊಂದರೆ ಇನ್ನು ತಪ್ಪಿಲ್ಲ. ಕರೋನಾ ಜೊತೆಯಲ್ಲಿಯೇ ಬದುಕಲು ನಾವು ಕಲಿತುಕೊಳ್ಳಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ಬಳಕೆಯನ್ನು ನಮ್ಮ ಬದುಕಿನ ಕರ್ತವ್ಯಗಳಾಗಿ ಸ್ವೀಕರಿಸಬೇಕು ಎಂದು ಹೇಳಿದರು.

Contact Your\'s Advertisement; 9902492681

ಕಾರ್ಮಿಕರ ಸುರಕ್ಷತೆಗೆ ಹೆಚ್ಚು ಒತ್ತು ನೀಡುವ ಮೂಲಕ ಕಾರ್ಖಾನೆಗಳು ತಮ್ಮ ಕೆಲಸವನ್ನು ಮುಂದುವರೆಸಿಕೊಂಡು ಹೋಗಬೇಕು. ಕಾರ್ಮಿಕರುಗಳಿಗೆ ಅಗತ್ಯವಿರುವ ಸುರಕ್ಷತಾ ಸೌಲಭ್ಯಗಳನ್ನು ಕಾರ್ಖಾನೆ ಆಡಳಿತ ಮಂಡಳಿ ಒದಗಿಸುವ ಮೂಲಕ ಕಾರ್ಖಾನೆಯ ಕೆಲಸಗಳು ಮುಂದುವರೆಸಿಕೊಂಡು ಹೋಗಬೇಕು ಎಂದರು. ಕೋಕೊ ಕೋಲಾ ಫ್ಯಾಕ್ಟರಿಯಲ್ಲಿ ಅಳವಡಿಸಿಕೊಂಡಿರುವ ಸುರಕ್ಷತೆಯ ಕ್ರಮಗಳನ್ನು ಪರಿಶೀಲಿಸಿದರು.

ಇದೇ ವೇಳೆ ಕೊಕೋ ಕೋಲಾ ಕಂಪನಿಯ ಆವರಣದಲ್ಲಿ ಮಾನ್ಯ ಸಚಿವರ ಭೇಟಿಯ ನೆನಪಿಗೆ ಗಿಡವನ್ನು ನೆಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here