ಬಿಸಿ ಬಿಸಿ ಸುದ್ದಿ

ಅಭಿವೃದ್ಧಿಗೆ ವಿರೋಧ ಮಾಡುವುದು ಬಿಎಸ್ ವೈ ಹುಟ್ಟುಗುಣ: ದೇಶಪಾಂಡೆ

ಹಾವೇರಿ: ಎಲ್ಲದಕ್ಕೂ ವಿರೋಧ ಮಾಡುವ ಗುಣವನ್ನು ವಿರೋಧ ಪಕ್ಷದ ನಾಯಕರು ಹೊಂದಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಅವರು ಹಾವೇರಿಯಲ್ಲಿ ಬರ ವೀಕ್ಷಣೆಗೆ, ಆಗಮಿಸಿ ಜಿಲ್ಲೆಯ ತವರಮೆಳ್ಳಹಳ್ಳಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಬರಗಾಲ ನಿರ್ವಹಣೆಯಲ್ಲಿ ಮೈತ್ರಿ ಸರಕಾರ ವಿಫಲವಾಗಿದೆ ಎಂಬ  ಯಡಿಯೂರಪ್ಪ ಹೇಳಿಕೆಯನ್ನು ಒಪ್ಪಲು ಆಗದು, ರಾಜ್ಯದಲ್ಲಿ ಅಭಿವೃದ್ಧಿ ವಿಚಾರವಾಗಿ ವಿರೋಧ ಮಾಡುವುದು ಯಡಿಯೂರಪ್ಪ ಅವರ ಹುಟ್ಟುಗುಣ ಎಂದು  ಟಾಂಗ್ ನೀಡಿದರು.

ನಾನು ವಿರೋಧ ಪಕ್ಷದಲ್ಲಿ ಕುಳಿತಾಗ ಎಂದಿಗೂ ಅಭಿವೃದ್ಧಿ ‌ವಿಚಾರದಲ್ಲಿ ವಿರೋಧ ಮಾಡಿಲ್ಲ. ರಾಜ್ಯದ ಬರ ವಿಚಾರದಲ್ಲಿ ಆಡಳಿತ ಮತ್ತು ವಿರೋಧ ಒಟ್ಟಿಗೆ ಕೆಲಸ ನಿರ್ವಹಿಸುವ. ನಮ್ಮ ಜವಾಬ್ದಾರಿ ಕೂಡಾ ಆಗಿದೆ ಎಂದು ತಿಳಿಸಿದರು.

ಮೈತ್ರಿ ಸರಕಾರದ ಕುರಿತು ಸಚಿವರಿಗೆ ಕೆಳಿದ ಪ್ರಶ್ನೆಗೆ ಕೆಂಡಾಮಂಡಲಗೊಂಡ ದೇಶಪಾಂಡೆ, ಎ ಬಿಡ್ರಿ ನಿಮಗೆ ಯಾಕೆ ಮೈತ್ರಿ ಚಿಂತಿ, ನಿವೇನು ಶಾಸಕರು ಅಲ್ಲಾ, ಸಂಸದರು, ಸಚಿವರಲ್ಲ ಎಂದು ಹಾರಿಕೆ ಉತ್ತರ ನೀಡಿದರು.

ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಯಿತಾ ಎಂಬ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿ, ರಾಜಕೀಯ ಬಗ್ಗೆ ಕಡಿಮೆ ಮಹತ್ವಕೊಡಿ, ಅಭಿವೃದ್ಧಿ ಕಡೆಗೆ ಹೆಚ್ಚಿನ ಮಹತ್ವ ನೀಡಿ ಎಂದು ಸಲಹೆ  ನೀಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago