ಸುರಪುರ: ಯಾದಗಿರಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಅನೇಕ ವರ್ಷಗಳಿಂದ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾಯಿಸುವಂತೆ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಕಂದಾಯ ಲೋಕೊಪಯೋಗಿ ನೀರಾವರಿ ಸೇರಿದಂತೆ ಅನೇಕ ಇಲಾಖೆಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು ಹತ್ತು ವರ್ಷಗಳಿಂದಲೂ ಒಂದೇ ಜಾಗದಲ್ಲಿದ್ದಾರೆ.
ಇದರಿಂದ ಯಾವುದೇ ಇಲಾಖೆಯಲ್ಲಿನ ಜನರ ಕೆಲಸ ಬೇಗ ಆಗದೆ ಜನರು ಬೇಸತ್ತಿದ್ದಾರೆ. ಆದ್ದರಿಂದ ಸುಮಾರು ಐದು ವರ್ಷಕ್ಕಿಂತ ಹೆಚ್ಚಿನ ಅವಧಿ ಒಂದೇ ಸ್ಥಳದಲ್ಲಿರುವ ಅಧಿಕಾರಿಗಳನ್ನು ಸರಕಾರ ಕೂಡಲೆ ಬೇರೆಡೆಗೆ ವರ್ಗಾವಣೆ ಮಾಡಿ ಬೇರೊಬ್ಬ ಅಧಿಕಾರಿಗಳನ್ನು ನೇಮಕಗೊಳಿಸಬೇಕು.ಇದರಿಂದ ಸಾರ್ವಜನಿಕರ ಕೆಲಸಗಳು ಬೇಗ ಆಗುವುದಲ್ಲದೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ.ಆದ್ದರಿಂದ ಸರಕಾರ ಈ ವಿಷಯಕ್ಕು ಗಂಭೀರವಾಗಿ ತೆಗೆದುಕೊಂಡು ಎಲ್ಲಾ ಇಲಾಖೆಗಳಲ್ಲಿ ಅನೇಕ ವರ್ಷಗಳಿಂದ ಬೀಡು ಬಿಟ್ಟವರ ಎತ್ತಂಗಡಿಗೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…