ಶಹಾಬಾದ: ಸ್ಪರ್ಶ್ಯ ಜಾತಿಗಳಾದ ಲಂಬಾಣಿ,ಭೋವಿ ವಡ್ಡರ್, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ತೆಗೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡುವ ಅಗತ್ಯ ಎಂದಿಗಿಂತಲೂ ಇಂದು ಅವಶ್ಯವಾಗಿದೆ ಎಂದು ಅಸ್ಪೃಶ್ಯ ಸಮುದಾಯಗಳ ಮಹಾಸಭಾದ ಅಧ್ಯಕ್ಷ ಭೀಮರಾವ ತೇಗಲತಿಪ್ಪಿ ಹೇಳಿದರು.
ಅವರು ಶನಿವಾರ ನಗರದ ಪಾರ್ವತಿ ಸಭಾಂಗಣದಲ್ಲಿ ಆಯೋಜಿಸಲಾದ ಪರಿಶಿಷ್ಟ ಜಾತಿ ಸಮುದಾಯಗಳ ಸಮಾರಂಭದಲ್ಲಿ ಮಾತನಾಡಿದರು.
ಅಸ್ಪೃಶ್ಯ ಜಾತಿಗಳಾದ ಪರಿಶಿಷ್ಟ ಜಾತಿ(ಹೊಲೆಯ) ಮತ್ತು ಮಾದಿಗರಿಗೆ ಮಾತ್ರ ಮೀಸಲಾತಿಯನ್ನು ನೀಡಬೇಕೆಂದು ಸರ್ವೋಚ್ಛ ನ್ಯಾಯಾಲಯ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ.ಆದರೆ ಸರ್ಕಾರ ಮಾತ್ರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ಪರಿಶಿಷ್ಟ ಜಾತಿಗಳಾದ ಹೊಲೆಯ,ಮಾದಿಗ, ಸಮಗಾರ, ಡೋಹರ ಸಮಾಜದ ಬಂಧುಗಳಿಗೆ ಸಿಗಬೇಕಾದ ಮೀಸಲಾತಿಯ ಸವಲತ್ತುಗಳು ಸಿಗಬೇಕಾದರೆ ನಾವೆಲ್ಲರೂ ಒಂದಗೂಡಿ ಹೋರಾಟ ಮಾಡುವ ಅಗತ್ಯತೆಯಿದೆ ಎಂದು ಹೇಳಿದರು.
ಹಣಮಂತ ಭೋಧನಕರ್ ಮಾತನಾಡಿ, ರಾಜ್ಯ ಸರ್ಕಾರ ಕೂಡಲೇ ಸ್ಪಶ್ರ್ಯ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈಬಿಟ್ಟು, ಪರಿಶಿಷ್ಟ ಜಾತಿಗಳಿಗೆ ನ್ಯಾಯ ಒದಗಿಸಬೇಕಿದೆ.ಅಲ್ಲದೇ ಸರ್ವೋಚ್ಛ ನ್ಯಾಲಯದ ಆದೇಶವನ್ನು ಎತ್ತಿ ಹಿಡಿಯಬೇಕೆಂದು ಆಗ್ರಹಿಸಿದರು.
ಪರಮೇಶ್ವರ ಖಾನಾಪುರೆ,ಶ್ಯಾಮ ನಾಟೇಕಾರ,ಮಲ್ಲೇಶಿ ಸಜ್ಜನ್, ದಶರಥ ಓಣಿ,ಸುರೇಶ ಮೆಂಗನ್,ರಾಜೇಶ ಹೊನಗುಂಟಿಕರ್, ಗಿರೀಶ ಕಂಬಾನೂರ,ಶಿವರಾಜ ಕೋರೆ,ನಾಗರಾಜ ಸಿಂಘೆ,ಶರಣಬಸಪ್ಪ ಪಗಲಾಪೂರ,ದೇವೆಂದ್ರ ಗಾಯಕವಾಡ,ಬಸವರಾಜ ಮಯೂರ,ಪ್ರವೀಣ ರಾಜನ್,ನರೇಶ ಕಟಕೆ,ಕಾಶಿರಾಯ ನಂದೂರಕರ್,ಮಲ್ಲಿಕಾರ್ಜುನ್ ಗಾಜರೆ,ಬಸಣ್ಣ ಸಿಂಗೆ,ಸುರೇಶ ಹಾದಿಮನಿ,ವಿಶಾಲ ದರ್ಗಿ,ದಿನೇಶ ದೊಡ್ಡಮನಿ ಸೇರಿದಂತೆ ಅನೇಕ ಜನರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…