ಶಹಾಬಾದ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜ್ಯದ ಮಾಜಿ ಸಚಿವ ಜಿ.ರಾಮಕೃಷ್ಣ(84) ಅವರು ರವಿವಾರ ನಿಧನರಾದರು.ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಗರದ ಘಟಕದ ಅಧ್ಯಕ್ಷ ಡಾ.ರಶೀದ್ ಮರ್ಚಂಟ್ ಹಾಗೂ ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ್ ಹಿರೇಮಠ ಸಂತಾಪ ಸೂಚಿಸಿದ್ದಾರೆ.
ಜಿ.ರಾಮಕೃಷ್ಣ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ವೀರಪ್ಪ ಮೋಯ್ಲಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು. ಅಲ್ಲದೇ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾಗಿಯೂ ಜನಪರವಾದ ಅಭಿವೃದ್ಧಿ ಕೆಲಸಗಳನ್ನು ಮಾಡಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದರು.
ಬಹಳ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರ ಅಗಲಿಕೆ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೆ ಎಂದು ಹೇಳಿದರು.
ಸಂತಾಪ: ಮಾಜಿ ಸಚಿವ ಜಿ.ರಾಮಕೃಷ್ಣ ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಮುಖಂಡರಾದ ಶರಣಗೌಡ ಪಾಟೀಲ, ಎಪಿಎಮ್ಸಿ ಸದಸ್ಯ ವಿಶ್ವಾರಾಧ್ಯ ಬೀರಾಳ,ಗಿರೀಶ ಕಂಬಾನೂರ, ಸಾಹೇಬಗೌಡ ಬೋಗುಂಡಿ,ಭೀಮುಗೌಡ ಖೇಣಿ, ರಾಜೇಶ ಯನಗುಂಟಿಕರ್, ಸಾಬೇರಾ ಬೇಗಂ, ಡಾ.ಅಹ್ಮದ್ ಪಟೇಲ್,ಜಾವೀದ್, ಸುಭಾಷ ಪವಾರ,ಕುಮಾರ ಚವ್ಹಾಣ, ನಾಗಣ್ಣ ರಾಂಪೂರೆ, ಸಯ್ಯದ್ ಜಹೀರ್, ಡಾ.ಜಹೀರ್,ಅನ್ವರ್ ಪಾಶಾ,ಶಕೀಲ ಇಂಗಳಗಿ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…