ಬಿಸಿ ಬಿಸಿ ಸುದ್ದಿ

ಕೊರೋನಾ ಸೋಂಕಿನಿಂದ 4 ಜನ ನಿಧನ

ಕಲಬುರಗಿ: ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ 4 ಜನ ನಿಧನರಾಗಿರುವ ಬಗ್ಗೆ ರವಿವಾರ ದೃಢವಾಗಿದ್ದು, ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಇದೂವರೆಗೆ ಮೃತರಾದವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಐ.ಎಲ್.ಐ. ಹಿನ್ನೆಲೆಯಿಂದ ಕಲಬುರಗಿಯ ಜೆ.ಆರ್. ನಗರದ 45 ವರ್ಷದ ಮಹಿಳೆ (P-113437) ಜು.26 ರಂದು ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡ ಹಾಗೂ ಹೃದ್ರೋಗದಿಂದ ಬಳಲುತ್ತಿದ್ದ ಕಲಬುರಗಿಯ ಜೆ.ಆರ್.ನಗರದ 65 ವರ್ಷದ ವೃದ್ಧ (P-138364) ಜು.30 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಮಧುಮೇಹ‌ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ 64 ವರ್ಷದ ವೃದ್ಧ (P-154890) ಆ.2 ರಂದು ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಜೊತೆಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿಯ ಸಮತಾ ಕಾಲೋನಿಯ 60 ವರ್ಷದ ವೃದ್ಧೆ (P-174429) ಆ.5 ರಂದು ಆಸ್ಪತ್ರೆಗೆ ದಾಖಲಾಗಿ ಆ.7 ರಂದು ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago