ಆಳಂದ: ಮನುಷ್ಯನ ಜೀವನದ ಅತೀ ಮಹತ್ವದ ಘಟ್ಟವಾದ ಎಸ್‌ಎಸ್‌ಎಲ್‌ಸಿ ಫಲಿತಾಂಶ ನಿರೀಕ್ಷೆಯಂತೆ ಬಂದಿದ್ದು ವಿದ್ಯಾರ್ಥಿಗಳು ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕೆಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ತಿಳಿಸಿದ್ದಾರೆ.
ಕೊರೋನಾ ಭೀತಿಯ ನಡುವೆಯೂ ದೇಶದಲ್ಲಿಯೇ ಮಾದರಿಯನ್ನುವಂತೆ ಕರ್ನಾಟಕ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿವೆ ಅದರ ಶ್ರೇಯ ಸಂಪೂರ್ಣವಾಗಿ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ. ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿರುವ ಕಾರಣ ಫಲಿತಾಂಶ ಉತ್ತಮವಾಗಿ ಬಂದಿದೆ. ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳು ಧೃತಿಗೆಡದೆ ಪೂರಕ ಪರೀಕ್ಷೆ ಬರೆದು ಮತ್ತೆ ಅದರಲ್ಲಿ ಯಶಸ್ಸು ಸಾಧಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎನ್‌ಇಪಿಗೆ ಸ್ವಾಗತ: ನೂತನ ಶಿಕ್ಷಣ ನೀತಿಯನ್ನು ಹರ್ಷಾನಂದ ಎಸ್ ಗುತ್ತೇದಾರ ಸ್ವಾಗತಿಸಿದ್ದಾರೆ. ಪ್ರಸ್ತುತ ಪ್ರಸ್ತಾಪಿಸಿರುವ ನೂತನ ಶಿಕ್ಷಣ ನೀತಿಯು ಸಂಪೂರ್ಣವಾಗಿ ದೇಶಿಯವಾಗಿದ್ದು, ಈ ಪದ್ಧತಿಯಲ್ಲಿ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಿದ್ದು ಇದರಿಂದ ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…