ಬಿಸಿ ಬಿಸಿ ಸುದ್ದಿ

ಆಡಿಯೋಲಾಜಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್.ಪಿ.ಪಿ.ಸಿ.ಡಿ. ಮತ್ತು ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಆಡಿಯೋಲಾಜಿಸ್ಟ್-01 ಹಾಗೂ ಆಡಿಯೋಮೆಟ್ರಿಕ್ ಅಸಿಸ್ಟಂಟ್-01 ಹುದ್ದೆಗಳನ್ನು ಮೆರಿಟ್-ಕಂ-ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ತಿಳಿಸಿದ್ದಾರೆ.

ಆಡಿಯೋಲಾಜಿಸ್ಟ್ 01 ಹುದ್ದೆಗೆ ಆರ್.ಸಿ.ಐ. (RCI) ಪ್ರಮಾಣೀಕೃತ ಸಂಸ್ಥೆಯಿಂದ ಆಡಿಯೊಲಾಜಿ ಮತ್ತು ಸ್ಪೀಚ್ ಲಾಂಗ್ವೇಜ್ ಪ್ಯಾಥೊಲಾಜಿಯಲ್ಲಿ ಪದವಿ (BSc in Speech & Hearing)ಪಾಸಾಗಿರಬೇಕು. ಮಾಸಿಕ 30,000 ರೂ.ಗಳ ಸಂಭಾವನೆ ನೀಡಲಾಗುತ್ತದೆ. ಆಡಿಯೋಮೆಟ್ರಿಕ್ ಅಸಿಸ್ಟಂಟ್ ಹುದ್ದೆಗೆ ಆರ್.ಸಿ.ಐ. (RCI) ಪ್ರಮಾಣಿಕೃತ ಸಂಸ್ಥೆಯಿಂದ 1 ವರ್ಷದ ಡಿಪ್ಲೋಮಾ ಇನ್ ಹಿಯರಿಂಗ್ ಆ್ಯಂಡ್ ಸ್ಪೀಚ್ (DHLS) ಪಾಸಾಗಿರಬೇಕು. ಮಾಸಿಕ 15,000 ರೂ.ಗಳ ಸಂಭಾವನೆ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಕುಟುಂಬ ಕಲ್ಯಾಣ ವಿಭಾಗದ ಕೋಣೆಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ಪೂರಕ ಮೂಲ ದಾಖಲೆಗಳೊಂದಿಗೆ ಬಯೊಡಾಟಾದೊಂದಿಗೆ (ವಿದ್ಯಾರ್ಹತೆ ಅಂಕಪಟ್ಟಿಯ ದೃಢೀಕೃತ ಪ್ರತಿ, ಅನುಭವ ಪ್ರಮಾಣಪತ್ರ, ಗ್ರಾಮೀಣ ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರ, 371(ಜೆ), ಯೊಜನಾ ನಿರಾಶ್ರಿತರು, ಅಂಗವಿಕಲ ಮೂಲ ಪ್ರಮಾಣಪತ್ರ, ಆರ್‍ಸಿಐ, 1 ಸೆಟ್ ನಕಲು ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ 2020ರ ಆಗಸ್ಟ್ 17ರವರೆಗೆ ಪ್ರತಿದಿನ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 09449843394 ಗೆ ಸಂಪರ್ಕಿಸಲು ಕೋರಲಾಗಿದೆ.

ಒಂದು ವೇಳೆ ಮೇಲ್ಕಂಡ ಹುದ್ದೆಗಳು ಭರ್ತಿಯಾಗದೇ ಇದ್ದಲ್ಲಿ ಆ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಪ್ರತಿ ಶನಿವಾರ ವಾಕ್-ಇನ್ ಇಂಟರವ್ಯೂ (ದಿನಾಂಕ: 31-03-2021 ರ ವರೆಗೆ) ಮುಖಾಂತರ ಭರ್ತಿ ಮಾಡಿಕೊಳ್ಳಲಾಗುವುದು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

46 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

48 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

53 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

57 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

58 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago