ಗುತ್ತೇದಾರ ಆಂಗ್ಲ್ ಮಾಧ್ಯಮ ಶಾಲೆಗೆ ಶೇ.100ರಷ್ಟು ಫಲಿತಾಂಶ

0
288

ಆಳಂದ: ಪಟ್ಟಣದ ಪ್ರತಿಷ್ಟಿತ ಎಸ್‍ಆರ್‍ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಸುಭಾಷ್ ರುಕ್ಮಯ್ಯ ಗುತ್ತೇದಾರ ಆಂಗ್ಲ್ ಮಾಧ್ಯಮ ಶಾಲೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರತಿಶತ ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಕುಳಿತಿದ್ದ ಎಲ್ಲ 28 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು. 28 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನನಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಶಾಲೆಯ ಕು. ಓಂಕಾರ ಶೇ 92%, ಕು. ಆರತಿ ಶೇ 91%, ಕು. ಸಿದ್ದೇಶ 91%, ಕು. ಹಶೀರ ಅಹ್ಮದ್ ಶೇ 90% ಅಂಕಗಳನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ.

Contact Your\'s Advertisement; 9902492681

ನಮ್ಮ ಸಂಸ್ಥೆಯ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ. ವರ್ಷದಿಂದ ವರ್ಷಕ್ಕೆ ಫಲಿತಾಂಶದಲ್ಲಿ ವೃದ್ಧಿಯಾಗುತ್ತಿದೆ. ಸಾಧನೆ ಮಾಡಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಗೂ ಸೂಕ್ತ ಮಾರ್ಗದರ್ಶನ ಮಾಡಿದ ಶಿಕ್ಷಕ ಸಿಬ್ಬಂದಿಗಳಿಗೂ ಅಭಿನಂದನೆಗಳು. – ಸುಭಾಷ್ ಆರ್ ಗುತ್ತೇದಾರ, ಶಾಸಕರು, ಆಳಂದ ಹಾಗೂ ಅಧ್ಯಕ್ಷರು ಎಸ್‍ಆರ್‍ಜಿ ಫೌಂಡೇಶನ್.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಆಳಂದ ಶಾಸಕರಾದ ಸುಭಾಷ್ ಆರ್ ಗುತ್ತೇದಾರ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಜಿ.ಪಂ ಸದಸ್ಯರಾದ ಹರ್ಷಾನಂದ ಎಸ್ ಗುತ್ತೇದಾರ ಮತ್ತು ಸಂಸ್ಥೆಯ ಆಡಳಿತಾಧಿಕಾರಿ ಡಾ. ರಾಘವೇಂದ್ರ ಚಿಂಚನಸೂರ ಸೇರಿದಂತೆ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here