ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ

0
44

ಕಲಬುರಗಿ: ಭಾವಚಿತ್ರವುಳ್ಳ ಮತದಾರರ ಪಟ್ಟಿ ತಯಾರಿಕೆಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೇ ಆರಂಭಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

01-01-2021 ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ಆಗಸ್ಟ್ 10 ರಿಂದ 31 ರವರೆಗೆ ಮತದಾನ ಕೇಂದ್ರಗಳ ರೇಷನಾಲೈಜೇಶನ್ ಬದಲಾವಣೆ, ಭಾಗವಾರು ಮತದಾರರ ಪಟ್ಟಿಯಲ್ಲಿ ಹೆಚ್ಚುವರಿ ಹೆಸರು ತೆಗೆದು ಹಾಕುವಿಕೆ ಹಾಗೂ ಭಾಗಗಳ ಗಡಿ ಗುರುತಿಸುವ ಕಾರ್ಯವನ್ನು ನಡೆಸಲಾಗುತ್ತದೆ.

Contact Your\'s Advertisement; 9902492681

ನವೆಂಬರ್ 1 ರಿಂದ 15ರವರೆಗೆ ನಮೂನೆಗಳ ಸಿದ್ಧಪಡಿಸುವಿಕೆ ಕಾರ್ಯ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟಣೆಗೆ ಪೂರ್ವಸಿದ್ಧತೆ ಕೈಗೊಂಡು ನವೆಂಬರ್ 16 ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನವೆಂಬರ್ 16 ರಿಂದ ಡಿಸೆಂಬರ್ 15 ರವರೆಗೆ ಕರಡು ಮತದಾರರ ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು.

ತದನಂತರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ ಇವರು ಸೂಚಿಸುವ ಎರಡು ಶನಿವಾರ ಹಾಗೂ ಭಾನುವಾರಗಳಂದು ವಿಶೇಷ ಆಂದೋಲನ ಕೈಗೊಂಡು ಕರಡು ಮತದಾರರ ಪಟ್ಟಿಗೆ ಸ್ವೀಕೃತ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು. ಒಟ್ಟಾರೆ 2021ರ ಜನವರಿ 5ರೊಳಗೆ ಎಲ್ಲ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗುವುದು.

2021ರ ಜನವರಿ 14 ರೊಳಗಾಗಿ ಚುನಾವಣಾ ಆಯೋಗದಿಂದ ಅನುಮತಿ ಪಡೆದುಕೊಂದು ಜನವರಿ 15 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here