ಕಲಬುರಗಿ: ಜಿಲ್ಲೆಯ ಮಹಾಗಾಂವ ತಡಕಲ್ ತಾಂಡದಲ್ಲಿ ದಲಿತ ಯುವಕನ್ನು ಮರಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಅನಿಲ್ ಕುಮಾರ ತಂದೆ ಚಂದ್ರಶಾ (24) ಹಲ್ಲೆಗೆ ಒಳಗಾದ ಯುವಕ, ಚಿತ್ತಾಪುರ ತಾಲೂಕು ವಟವಟಿ ಗ್ರಾಮ ನಿವಾಸಿಯಾಗಿದ್ದ ಅನಿಲ್ ಅರಣಕಲ್ ಗ್ರಾಮ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಸುತ್ತಿದ್ದ ಎನ್ನಲಾಗಿದ್ದು, ತಡಕಲ್ ತಾಂಡಾದಲ್ಲಿ ಹಲ್ಲೆ ನಡೆಸಲಾಗಿದೆ.
ಅನಿಲ್ ಕಳೆದ ರಾತ್ರಿ ತಡಕಲ್ ತಾಂಡಕ್ಕೆ ಪ್ರಿಯತಮೆಗೆ ಭೇಟಿ ನೀಡಲು ತೆರಳಿದಾಗ ಯುವತಿಯ ಕುಟುಂಬಸ್ಥರು ಯುವಕ ಅನಿಲನ್ನು ಮರಕ್ಕೆ ಕಟ್ಟಿಹಾಕಿ ಮರಣಾಂತಿ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದ್ದು, ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಹಿನ್ನೆಲೆ: ಅನಿಲ್ ಹಾಗೂ ತಡಕಲ್ ತಾಂಡದ ಯುವತಿಯೊಂದಿಗೆ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕಲಹ ನಡೆದಿತ್ತು. ಮಹಾಗಾಂವ ಪೊಲೀಸರು ಅನಿಲ್ ಗೆ ವಾರನಿಂಗ್ ಕುಡ ನೀಡಿದರು ಎನ್ನಲಾಗಿದೆ.
ಆದರೆ ಅನಿಲ್ ಅವರ ಅವರ ಅಣ್ಣ ಭಾಸ್ಕರ್ ಅವರು ಇ ಮೀಡಿಯಾ ಲೈನ್ ಜೊತೆ ಮಾತನಾಡಿ, ಅನಿಲ್ ಲೋಕ ಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಕೆಲಸ ಮಾಡಿರುವುದರಿಂದ ಅನಿಲ್ ಗೆ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದಾರೆಂದು ಆರೋಪಿಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಗಾಂವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಅನಿಲ್ ಕುಮಾರ ಮೇಲೆ ಮರಣಾಂತಿಕ ಹಲ್ಲೆ ನಡೆದಿರುವುದರಿಂದ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…