ಕಲಬುರಗಿ: ಎಸ್.ಆರ್. ಕಮಾಂಡೊಸ್ ದಿಂದ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಜನ್ಮದಿನಾಚರಣೆ ಪ್ರಯುಕ್ತ ಸಿದ್ದರಾಮೋತ್ಸವ ಉದನೂರ ರಸ್ತೆಯಲ್ಲಿರುವ ಡಿಡಿಯು ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ವಿವಿಧ ಹಳ್ಳಿಗಳಿಂದ ಆಗಮಿಸಿದ ಕೂಲಿ ಕಾರ್ಮಿಕರಿಗೆ ೫೦ ಆಹಾರ ಧಾನ್ಯ ಕಿಟ್‌ಗಳು ವಿತರಿಸುವ ಮೂಲಕ ಆಚರಿಸಲಾಯಿತು.
ಎಸ್.ಆರ್. ಕಮಾಂಡೊಸ್ ಸಂಸ್ಥಾಪಕ ನಿಂಗಪ್ಪ ಪೂಜಾರಿ ಮಾತನಾಡಿ, ಸಿದ್ರಾಮಯ್ಯನವರು ಇನ್ನೊಂದು ಸಲ ಮುಖ್ಯಮಂತ್ರಿಗಳನ್ನಾಗಿಸುವ ಉzಶದಿಂದ ಈ ಸಂಘಟನೆ ಹುಟ್ಟು ಹಾಕಲಾಗಿದೆ. ಅವರು ಸಿ.ಎಂ. ಆಗಿದ್ದಾಗ ಕೈಗೊಂಡ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.
ಅಹಿಂದ ಹೋರಾಟಗಾರ ಟಿ.ಶಶಿಧರ ಮಾತನಾಡಿ, ಸಿದ್ರಾಮಯ್ಯನವರ ಜನ್ಮ ದಿನ ಆಚರಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಡಿಡಿಯು ಶಿಕ್ಷಣ ಸಂಸ್ಥೆ ಅಧ್ಯಕ್ಷ ಭೀಮಣ್ಣ ಮೇಟಿ, ಉದ್ಯಮಿ ಮಹಾರಾಜ ಡಿಗ್ಗಿ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಧರ್ಮರಾಜ ಬಿ. ಹೇರೂರ, ಯುವ ಉದ್ಯಾಮಿ ಮಹಾರಾಜ ದಿಗ್ಗಿ, ಕೆಂಬಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಚಿಂಚೋಳಿ, ಕರ್ನಾಟಕ ಸೌಹಾರ್ಧ ವೇದಿಕೆ ಅಧ್ಯಕ್ಷ ಮಹಿಬೂಬ ಮುಲ್ಲಾ ಬಳಬಟ್ಟಿ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…