ಬಸವನ ಬಾಗೇವಾಡಿ: ಶರಣ ವಿಶ್ವರಾಧ್ಯ ಸತ್ಯಂಪೇಟೆ ಅವರ ಮೇಲಿನ ಕೇಸನ್ನು ವಾಪಸ್ ಪಡೆಯಬೇಕೆಂದು ಬಸವನಬಾಗೇವಾಡಿ ಪಟ್ಟಣದಲ್ಲಿ ಇಂದು ಗ್ರೇಡ್-2 ತಶಿಲ್ದಾರ್ ಪವಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ರಾಷ್ಟ್ರೀಯ ಬಸವ ಸೈನ್ಯದ ತಾಲೂಕಾ ಘಟಕದ ಅಧ್ಯಕ್ಷರಾದ ಸಂಜು ಬಿರಾದಾರ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಮಾತನಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡುವಂತಹ ಅಮೂಲ್ಯವಾದ ಹಲವಾರು ಗ್ರಂಥಗಳನ್ನು ರಚಿಸುವ ಮೂಲಕ ಅಪ್ಪಟ ಬಸವ ಭಕ್ತರಾದ ವಿಶ್ವರಾಧ್ಯ ಸತ್ಯಂ ಪೆಟ್ ಅವರ ಮೇಲೆ ಉದ್ದೇಶದಿಂದ ದಾವಣಗೆರೆಯಲ್ಲಿ ಕೇಸನ್ನು ದಾಖಲೆ ಮಾಡಿದ್ದಾರೆ ವೈಚಾರಿಕತೆ ಹಿನ್ನೆಲೆ ಇರುವ ಸತ್ಯಂಪೆಟ್ ಅವರ ಮೇಲೆ ಕೇಸನ್ನು ದಾಖಲಿಸಿರುವುದು ಖಂಡನೀಯ ವಿಷಯವಾಗಿದೆ ಎಂದು ಹೇಳಿದರು.
ಕೂಡಲೇ ಅವರ ಮೇಲೆ ದಾಖಲಾದ ಕೇಸನ್ನು ಮುಖ್ಯಮಂತ್ರಿಗಳು ಗೃಹ ಸಚಿವರು ವಾಪಸ್ ಪಡೆಯಬೇಕು ಒಂದು ವೇಳೆ ಕೇಸನ್ನು ವಾಪಸ್ ಪಡೆಯದಿದ್ದರೆ ರಾಷ್ಟ್ರೀಯ ಬಸವ ಸೈನ್ಯ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಮುಖಂಡರಾದ ಶ್ರೀಕಾಂತ್ ಕೊಟ್ರಶೆಟ್ಟಿ, ಮನ್ನಾನ ಶಾಬಾದಿ, ವೀರೇಶ್ ಗಬ್ಬೂರ್, ವಿಜಯ್ ರಗತಿ, ಮಂಜುನಾಥ್ ಜಾಲಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…