ಬಿಸಿ ಬಿಸಿ ಸುದ್ದಿ

ಆ್ಯಪ್ ಮೂಲಕ ರೈತರಿಂದಲೇ ಜಮೀನುಗಳಲ್ಲಿನ ಬೆಳೆ ಸಮೀಕ್ಷೆ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯು ಆಗಸ್ಟ್ 7 ರಿಂದ ಜಾರಿಗೆ ಬಂದಿದೆ. ಜಿಲ್ಲೆಯ ಎಲ್ಲಾ ರೈತರು ತಮ್ಮ ಅಂಡ್ರಾಯ್ಡ್ ಮೊಬೈಲ್ (ಗೂಗಲ್ ಪ್ಲೇ ಸ್ಟೋರ್ ಮೂಲಕ) ನಲ್ಲಿ ಬೆಳೆ ಸಮೀಕ್ಷೆ-2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಬೆಳೆದ ಬೆಳೆಗಳ ವಿವರಗಳನ್ನು ಆ್ಯಪ್‍ನಲ್ಲಿ ದಾಖಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ರಿತೇಂದ್ರನಾಥ ಸುಗೂರು ತಿಳಿಸಿದ್ದಾರೆ.

ಜಿಲ್ಲೆಯ ರೈತರು ಸ್ವತ: (ತಮ್ಮ ಜಮೀನಿನ ಸರ್ವೇ ನಂ., ಹಿಸ್ಸಾ ನಂಬರವಾರು) ತಾವು ಬೆಳೆದ ಬೆಳೆಗಳ ಹಾಗೂ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಬೆಳೆ ಸಮೀಕ್ಷೆ-2020 ಆ್ಯಪ್‍ನಲ್ಲಿ ದಾಖಲಿಸಬೇಕು.

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್‍ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು, ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಎನ್.ಡಿ.ಆರ್.ಎಫ್. ಮತ್ತು ಎಸ್.ಟಿ.ಆರ್.ಎಫ್. ಅಡಿ ಸಹಾಯಧನ ನೀಡಲು, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತದೆ.

ಆದ್ದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇμÉ್ಮ ಹಾಗೂ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‍ನಲ್ಲಿ ನಮೂದಿಸಬೇಕು. ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿರುವ ವಿದ್ಯಾವಂತ ಯುವಕರು ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತರಿಗೆ ಬೆಳೆ ತಂತ್ರಾಂಶದ ಮೂಲಕ ದಾಖಲಿಸಲು ಸಹಾಯ ಮಾಡಬೇಕು.

ಮುಂಗಾರು ಹಂಗಾಮಿನ ಬೆಳೆ ವಿಮೆ ಸಮೀಕ್ಷೆ ವಿವರಗಳನ್ನು 2020ರ ಆಗಸ್ಟ್ 11ರಿಂದ 24ರವರೆಗೆ ಅಪಲೋಡ್ ಮಾಡಲು ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇμÉ್ಮ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ನಿಗದಿತ ಸಮಯದೊಳಗೆ ಬೆಳೆಯ ಮಾಹಿತಿಯನ್ನು ಅಪ್‍ಲೋಡ್ ಮಾಡದೇ ಇದ್ದ ಪಕ್ಷದಲ್ಲಿ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ ಬೆಳೆ ಸಮೀಕ್ಷೆ ಆ್ಯಪ್ ಬೆಳೆ ಸಮೀಕ್ಷೆ ಕಾಲಾವಧಿಯನ್ನು ಆಗಸ್ಟ್ 24 ರಂದು ಮುಕ್ತಾಯವಾದ ನಂತರ ಅಪ್‍ಲೋಡ್ ಮಾಡಲಾಗುವುದು.

ಆ್ಯಪ್ ಬಳಕೆ ಹೇಗೆ: ಪಹಣಿಪತ್ರ ಹೊಂದಿರುವ ಜಮೀನಿನ ರೈತರು ಅಥವಾ ಮಾಲೀಕರು ಮೊಬೈಲ್‍ನಲ್ಲಿ ಪ್ಲೇಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಬೇಕು. ಸಮೀಕ್ಷೆಗೆ ಪೂರಕವಾಗಿ ಪಿ.ಆರ್. ಮೊಬೈಲ್ ಆ್ಯಪ್‍ನ್ನು ಆಡಳಿತ ಸುಧಾರಣೆ ಇಲಾಖೆ ಸಿದ್ಧಪಡಿಸಿದೆ. ರೈತರೇ ನೇರವಾಗಿ ಅಪ್‍ಲೋಡ್ ಮಾಡಲು ಅಥವಾ ಖಾಸಗಿಯವರು, ಸರ್ಕಾರಿ ಸಿಬ್ಬಂದಿಯ ಸಹಾಯದಿಂದ ಆಯಾ ಜಮೀನಿನ ಬೆಳೆ ಮಾಹಿತಿ ಕ್ರೋಢೀಕರಿಸಿ ಅಪ್‍ಲೋಡ್ ಮಾಡಲು ಇಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago