ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

0
69

ಕಲಬುರಗಿ: ದಲಿತರ ಭೂಮಿ ಕಿತ್ತುಕೊಳ್ಳುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ದಲಿತರ ಹಕ್ಕುಗಳ ರಕ್ಷಣೆಗಾಗಿ ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ದಲಿತ ಹಕ್ಕುಗಳ ಸಮಿತಿ-ಕರ್ನಾಟಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯ ನೇತೃತ್ವ ವಹಿಸಿ ಜನಪರ ಹೋರಾಟಗಾರ, ರೈತ ಮುಖಂಡ ಮಾರುತಿ ಮಾನಪಡೆ ಅವರು ಮಾತನಾಡಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಸಾವಿರಾರು ಕೇಸುಗಳು ಕೊರ್ಟ್ ನಲ್ಲಿ ಕೊಳೆಯುತ್ತಿವೆ. ಈ ಸಂಬಂಧ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತರ ನೆರವಿಗೆ ಬಾರದೆ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

Contact Your\'s Advertisement; 9902492681

ದಲಿತ ಹಕ್ಕುಗಳ ಸಮಿತಿ ಕಲಬುರಗಿ ಜಿಲ್ಲಾ ಸಂಚಾಲಕ ಪಾಂಡುರಂಗ ಮಾವಿನಕರ ಹಾಗೂ ಸುಧಾಮ ಧನ್ನಿ ಮಾತನಾಡಿ, ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

12 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ರೇವಣಸಿದ್ದಪ್ಪ ಕಲಬುರಗಿ, ಮಲ್ಲಣಗೌಡ, ಸಿದ್ಧರಾಮ ಹರವಾಳ, ಮೈಲಾರಿ ದೊಡ್ಮನಿ, ರವೀಂದ್ರ ಬೋಧನ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here