ಶಹಾಪುರ: ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ನಾಡಿನ ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ಅವಿಸ್ಮರಣೀಯವಾಗಿದ್ದು, ಇಂದು ಮಹಾತ್ಮಗಾಂಧಿ, ಸುಭಾಷ್ ಚಂದ್ರ ಬೋಸ್ ಇನ್ನಿತರ ಹೋರಾಟಗಾರರನ್ನು ನೆನೆಯಲೇಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಲಿಂಗಣ್ಣ ಆನೇಗುಂದಿ ಹೇಳಿದರು.
ನಗರದ ದೇಶಮುಖ್ ಬಡಾವಣೆಯಲ್ಲಿರುವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಬಹಳ ಪ್ರಮುಖವಾದದ್ದು ಹಾಗೂ ಅವರ ತತ್ವ ಆದರ್ಶಗಳು ಇಂದಿನ ಯುವಜನತೆಗೆ ಅತ್ಯವಶ್ಯಕ ಎಂದು ಖ್ಯಾತ ಕಥೆಗಾರರಾದ ಸಿದ್ದರಾಮ ಹೊನ್ನಕಲ ಹೇಳಿದರು.
ಹಿರಿಯ ಸಾಹಿತಿ ಶಿವಣ್ಣ ಇಜೇರಿ ಮಾತನಾಡಿ ಬ್ರಿಟಿಷರ ದಬ್ಬಾಳಿಕೆಯಿಂದ ಇಂದಿಗೆ ಸ್ವಾತಂತ್ರ್ಯ ಪಡೆದು 74 ವರ್ಷಗಳ ವಸಂತ ದಲ್ಲಿದ್ದು ಈ ವರ್ಷ ಕರೋನಾ ಮಹಾಮಾರಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯರಾದ ಗುಂಡಪ್ಪ ತುಂಬಗಿ,ಸಾಯಿಬಣ್ಣ ಮಡಿವಾಳಕರ, ದೇವೇಂದ್ರಪ್ಪ ಕನ್ಯಾಕೋಳೂರು ನಿಂಗಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…