ಬಿಸಿ ಬಿಸಿ ಸುದ್ದಿ

ಕೊರೋನಾ ನಿಯಂತ್ರಣಕ್ಕೆ ಕಲಬುರಗಿ ರಾಜ್ಯಕ್ಕೆ ಮಾದರಿ: ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ

ಕಲಬುರಗಿ:  ದೇಶದಲ್ಲಿಯೇ ಕೋವಿಡ್-19 ಸೋಂಕಿನಿಂದ ಮೊಟ್ಟಮೊದಲ ಸಾವು ಪ್ರಕರಣ ದಾಖಲಾದ ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳು ರಾಜ್ಯಕ್ಕೆ ಮಾದರಿಯಾಗಿದೆ. ಆ.14ರ ವರೆಗೆ ಜಿಲ್ಲೆಯಲ್ಲಿ 100411 ವ್ಯಕ್ತಿಗಳ ಕೋವಿಡ್-19 ತಪಾಸಣೆಗೊಳಪಡಿಸುವ ಮೂಲಕ ಅತಿ ಹೆಚ್ಚು ತಪಾಸಣೆ ಕೈಗೊಂಡ ಜಿಲ್ಲೆಗಳ ಅಗ್ರ ಪಟ್ಟಿಯಲ್ಲಿದೆ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಶ್ರೀಮಂತ ಬಾಳಾಸಾಹೇಬ್ ಪಾಟೀಲ ಹೇಳಿದರು.

ಶನಿವಾರ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ (ಡಿ.ಎ.ಆರ್.) ಮೈದಾನದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕಲಬುರಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ 8351 ಜನರಲ್ಲಿ 6150 (ಶೇ.74) ಗುಣಮುಖರಾಗಿದ್ದು, ಇದು ರಾಜ್ಯದಲ್ಲಿ ಗುಣಮಖ ಪ್ರಮಾಣದಲ್ಲಿ ಕಲಬುರಗಿ 2ನೇ ಸ್ಥಾನದಲ್ಲಿದೆ. ಇದಕ್ಕೆ ಜಿಲ್ಲಾಡಳಿತ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕೊರೋನಾ ರೋಗಿಗಳ ಚಿಕಿತ್ಸೆಗೆ ಜಿಲ್ಲೆಯಲ್ಲಿ 8 ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಪ್ರಸ್ತುತ ಜಿಮ್ಸ್ ಆಸ್ಪತ್ರೆ ಹಾಗೂ ಖಾಸಗಿ ಯುನೈಟೆಡ್ ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೊರೋನಾ ಸೋಂಕಿನ ಪರೀಕ್ಷೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೆ ಇ.ಎಸ್.ಐ.ಸಿ. ಆಸ್ಪತ್ರೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಬಸವೇಶ್ವರ ಆಸ್ಪತ್ರೆ, ಖಾಜಾ ಬಂದೇ ನವಾಜ್ ಆಸ್ಪತ್ರೆಯಲ್ಲಿಯೂ ಆರ್.ಟಿ.ಪಿ.ಸಿ.ಆರ್. ಟೆಸ್ಟಿಂಗ್ ಕೇಂದ್ರ ಆರಂಭಗೊಳ್ಳಲಿದ್ದು, ಇದು ಕಾರ್ಯಗತಗೊಂಡಲ್ಲಿ ಬೆಂಗಳೂರು ಬಿಟ್ಟರೆ ಹೆಚ್ಚುವರಿ ಟೆಸ್ಟಿಂಗ್ ಕೇಂದ್ರ ಹೊಂದಿರುವ ಜಿಲ್ಲೆ ಕಲಬುರಗಿ ಆಗಲಿದೆ. ಸಿ.ಯು.ಕೆ.ನಲ್ಲಿ ಟೆಸ್ಟಿಂಗ್ ಕೇಂದ್ರ ಸ್ಥಾಪಿಸಲು 84 ಲಕ್ಷ ರೂ. ನೀಡಲಾಗಿದೆ. ಎಲ್ಲವು ಅಂದುಕೊಂಡಂತೆ ನಡೆದಲ್ಲಿ ಅತಿ ಶೀಘ್ರದಲ್ಲಿ 24 ಗಂಟೆಯಲ್ಲಿ ಕೊರೋನಾ ಶಂಕಿತ ರೋಗಿಗೆ ವೈದ್ಯಕೀಯ ವರದಿ ಕೈಸೇರಲಿದೆ ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಕಳೆದ ಜುಲೈ 26ಕ್ಕೆ ಒಂದು ವರ್ಷ ಪೂರ್ಣಗೊಳಿಸಿದ್ದು, ಕಷ್ಠದ ಕಾಲದಲ್ಲಿ ಸಮರ್ಥ ಆಡಳಿತ ನೀಡಿದ ತೃಪ್ತಿ ನಮಗಿದೆ. ಆರಂಭದಲ್ಲಿ ಶತಮಾನ ಕಂಡರಿಯದ ನೆರ ಹಾವಳಿಯಲ್ಲಿಜನ-ಜಾನುವಾರಗಳನ್ನು ಕಳೆದಕೊಂಡವರಿಗೆ ಸೂರು-ಪರಿಹಾರ ಒದಗಿಸಿದೆ. ಇದೀಗ ಕೊರೋನಾ ವಿರುದ್ಧದ ಸಮರ ಸಾರಲಾಗಿದೆ ಎಂದರು.

ಕೊರೋನಾ ಲಾಕ್‍ಡೌನ್‍ದಿಂದ ಆರ್ಥಿಕ ಚಟುವಟಿಕೆ ಇಲ್ಲದೇ ಸಂಕಷ್ಟದಲ್ಲಿದ್ದ ವಿವಿಧ ವೃತ್ತಿ ಬಾಂಧವರಿಗೆ ಮತ್ತು ಕೃಷಿ ಕುಟುಂಬದವರಿಗೆ ದೇಶದಲ್ಲಿ ಮಾದರಿಯಾಗುವಂತಹ 2,272 ಕೋಟಿ ರೂ. ಬೃಹತ್ ಮೊತ್ತದ ಪ್ಯಾಕೇಜ್‍ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸುವುದರ ಮೂಲಕ ತೊಂದರೆಯಲ್ಲಿದ್ದ ಜನರ ನೆರವಿಗೆ ಧಾವಿಸಲಾಗಿದೆ ಎಂದರು.

ಸ್ವಾತಂತ್ರ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಪಿ.ಐ. ಶರಣಬಸಪ್ಪ ಹಾಗೂ ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಆರ್. ಆರ್.ಎಸ್.ಐ. ಹನುಮಂತ ನಾಯಕ ಅವರುಗಳ ನೇತೃತ್ವದಲ್ಲಿ ನಡೆದ ಪರೇಡಿನಲ್ಲಿ ಡಿ.ಎ.ಆರ್., ಸಿವಿಲ್, ಕೆ.ಎಸ್.ಆರ್.ಪಿ., ಕೇಂದ್ರ ಕಾರಾಗೃಹ, ಎನ್.ಸಿ.ಸಿ, ಪೊಲೀಸ್ ವಾದ್ಯ ವೃಂದ ಸೇರಿದಂತೆ ಒಟ್ಟು 6 ತುಕಡಿಗಳು ಭಾಗವಹಿಸಿದ್ದವು.

ಟ್ಯಾಬ್ಲೋ ಪ್ರದರ್ಶನ: ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಸಾರಿಗೆ, ಆಹಾರ, ಕಾರ್ಮಿಕ, ಆರೋಗ್ಯ, ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಂದ ಸಿದ್ದಪಡಿಸಲಾದ ಸರ್ಕಾರಿ ಯೋಜನೆಗಳು ಹಾಗೂ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸ್ತಬ್ಧಚಿತ್ರಗಳ ಪ್ರದರ್ಶನ ಸಭಿಕರ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಸದಸ್ಯ ಶಿವರಾಜ ಪಾಟೀಲ ರದ್ದೆವಾಡಗಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಮತ್ತು ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಈಶಾನ್ಯ ವಲಯದ ಐ.ಜಿ.ಪಿ. ಮನೀಷ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್.ಸತೀಷ ಕುಮಾರ, ಈ.ಕ.ರಾ.ರ.ಸಾ. ಸಂಸ್ಥೆಯ ಎಂ.ಡಿ. ಜಹೀರಾ ನಸೀಮ್, ಜಿಲ್ಲಾ ಪಂಚಾಯಿತಿ ಸಿ.ಇ.ಓ ಡಾ. ಪಿ. ರಾಜಾ, ಡಿ.ಸಿ.ಪಿ. ಕಿಶೊರ ಬಾಬು, ಎಸ್.ಪಿ. ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ಆಕಾಶ ಸೇರಿದಂತೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago