ಕಲಬುರಗಿ: ಚಿತ್ತಾಪೂರ ತಾಲೂಕಿನ ಭೀಮನಳ್ಳಿ ತಾಂಡದ ಜೈನಾಬಾಯಿ ಗಂಡ ಸೇವು ರಾಠೋಡ ಎಂಬುವರ ಮನೆಯ ಮೇಲೆ ಅಬಕಾರಿ ದಾಳಿ ನಡೆಸಿ 130 ಲೀಟರ ಬೆಲ್ಲದ ಕೊಳೆ ನಾಶಪಡಿಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 5 ಲೀಟರ ಕಳ್ಳಭಟ್ಟಿ ಸರಾಯಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ಚಿತ್ತಾಪೂರ ವಲಯದ ಅಬಕಾರಿ ಉಪ ನಿರೀಕ್ಷಕರು ತನಿಖೆ ಮುಂದುವರೆಸಿರುತ್ತಾರೆ ಎಂದು ಕಲಬುರಗಿ ವಿಭಾಗದ ಅಬಕಾರಿ ಉಪ ಅಧೀಕ್ಷಕರು ತಿಳಿಸಿದ್ದಾರೆ.
ಶಹಾಬಾದ ಪಟ್ಟಣದ ಡಕ್ಕಾ ತಾಂಡಾ ಸ್ಟೇಷನ ತಾಂಡಾ, ವಾಡಿ ಪಟ್ಟಣ ಮತ್ತು ಚಿತ್ತಾಪೂರ ಪಟ್ಟಣದ ಹಲವಾರು ಕಡೆ ದಾಳಿ ನಡೆಸಿ ಪರಿಶೀಲಿಸಲಾಯಿತು.
ಅದೇ ರೀತಿ ಕಲಬುರಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಎಸ್.ಕೆ. ಕುಮಾರ ಹಾಗೂ ಅಬಕಾರಿ ಉಪ ಆಯುಕ್ತೆ ಶಶಿಕಲಾ ಎಸ್.ಒಡೆಯರ್ ಇವರ ಆದೇಶದನ್ವಯ ಅಬಕಾರಿ ಉಪ ಅಧೀಕ್ಷಕ ಮಹ್ಮದ ಇಸ್ಮಾಯಿಲ ಇನಾಮದಾರ ಹಾಗೂ ಚಿತ್ತಾಪೂರ ಉಪವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ ರಾಂಪೂರೆ, ಕಲಬುರಗಿ ಉಪ ವಿಭಾಗದ ಅಬಕಾರಿ ನಿರೀಕ್ಷಕ ವಿಠ್ಠಲರಾವ ಎಂ. ವಾಲಿ, ಕಲಬುರಗಿ ವಲಯ ನಂ.1 ರ ಅಬಕಾರಿ ನಿರೀಕ್ಷಕ ಬಾಲಕೃಷ್ಣ ಮುದಕಣ್ಣ ಹಾಗೂ ವಲಯ ನಂ. 2ರ ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ಅವರ ನೇತೃತ್ವ ಹಾಗೂ ಸಿಬ್ಬಂದಿಯೊಂದಿಗೆ ಇತ್ತೀಚೆಗೆ ಕಲಬುರಗಿಯ ಭರತನಗರ, ಮಂಗಾರವಾಡಿ ಹಾಗೂ ಸಣ್ಣೂರು ತಾಂಡಾ, ಆಶ್ರಯ ಕಾಲೋನಿ ಫಿಲ್ಟರ್‍ಬೆಡ್ ತಾಂಡದಲ್ಲಿ ಪದೇ ಪದೇ ಅಕ್ರಮ ಮದ್ಯ ಕಳ್ಳಭಟ್ಟಿ ಸರಾಯಿ ಮತ್ತು ಬೆಲ್ಲದಕೊಳೆ ಸಂಗ್ರಹಣೆಯ ಕೇಂದ್ರಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಯಿತು. ಯಾವುದೇ ಅಕ್ರಮಗಳು ಕಂಡು ಬಂದಿರುವುದಿಲ್ಲ.
ಈ ಹಳೆಯ ಕಳ್ಳಭಟ್ಟಿ ಆರೋಪಿಗಳು ಹಾಗೂ ಅವರ ಮನೆಗಳನ್ನು ಪರಿಶೀಲನೆ ಮಾಡಲಾಗಿದೆ. ಯಾವುದೇ ಅಕ್ರಮಗಳು ಕಂಡು ಬಂದಿರುವುದಿಲ್ಲ. ಅವರು ಕಳ್ಳಭಟ್ಟಿ ಸರಾಯಿ ತಯಾರಿಕೆ ಬಿಟ್ಟು ಕೂಲಿ ಕೆಲಸದಲ್ಲಿ ತೊಡಗಿರುತ್ತಾರೆ. ದಾಳಿ ಸಮಯದಲ್ಲಿ ಯಾವುದೇ ಪರಿಕರಗಳನ್ನು ದೊರೆತಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…