ಬಿಸಿ ಬಿಸಿ ಸುದ್ದಿ

ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲ ವೃತ್ತಿ ಬಾಂಧವರ ಪಾತ್ರ ಗಮನಾರ್ಹ: ನ್ಯಾಯಮೂರ್ತಿ ಬಿ.ಎ. ಪಾಟೀಲ

ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್, ಸರದಾರ್ ವಲ್ಲಭ ಬಾಯಿ ಪಟೇಲ್ ಮುಂತಾದ ಮಹಾನ್ ನಾಯಕರು ಹೋರಾಡಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟು ಮಾದರಿಯಾಗಿದ್ದಾರೆ. ಅದೇ ರೀತಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರು ಹಾಗೂ ಕಾನೂನು ವೃತ್ತಿಯಲ್ಲಿ ತೊಡಗಿದ್ದವರ ಪಾತ್ರ ಕೂಡ ಗಮನಾರ್ಹವಾದುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದ ಹಿರಿಯ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಗುಣಗಾನ ಮಾಡಿದ್ದಾರೆ.

ಅವರು ಶನಿವಾರ ಕಲಬುರಗಿಯ ಹೊರವಲಯದಲ್ಲಿರುವ ಕರ್ನಾಟಕ ಉಚ್ಛ ನ್ಯಾಯಾಲಯ ಕಲಬುರಗಿ ಪೀಠದಲ್ಲಿ 74ನೇ ಸ್ವಾತಂತ್ರೋತ್ಸವದ ಧ್ವಜಾರೋಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಪ್ರತಿ ವರ್ಷಕ್ಕಿಂತ ಈ ಬಾರಿ ನಾವು ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಬೇಕಾಗಿದೆ. ಕಾರಣ, ಕೋವಿಡ್-19 ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ಜೀವನ ರಕ್ಷಣೆ ಮಾಡಿಕೊಳ್ಳಬೇಕಾಗಿದೆ. ಈ ಸಂಬಂಧ ಸರ್ಕಾರಗಳು ನೀಡಿರುವ ಮಾರ್ಗಸೂಚಿಗಳನ್ನು ಎಲ್ಲಾ ನಾಗರಿಕರು ಪಾಲಿಸುವ ಮೂಲಕ ಕೋವಿಡ್ ನಿರ್ಮೂಲನೆ ಮಾಡಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ದಿನದ 24 ಗಂಟೆಯೂ ತಮ್ಮ ಜೀವನ ಮುಡಿಪಾಗಿಟ್ಟು, ಧೈರ್ಯ ಮತ್ತು ಸಾಹಸದಿಂದ ಕೊರೋನಾ ರೋಗ ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ವೈದ್ಯರು, ನರ್ಸ್, ಆರೋಗ್ಯ ಕಾರ್ಯಕರ್ತರು ಹಾಗೂ ಸ್ವಯಂ ಸೇವಕರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಕ್ ಡೌನ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಜೀವನಶೈಲಿ ಮತ್ತು ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ನಮ್ಮ ಜೀವನಶೈಲಿ ಮತ್ತು ಆರ್ಥಿಕತೆ ಮತ್ತೆ ಯಥಾಸ್ಥಿತಿಗೆ ಬರಬೇಕಾದರೆ, ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಯುವ ಪೀಳಿಗೆಗಳು ತಮ್ಮ ಜವಾಬ್ದಾರಿ ಹಾಗೂ ದೇಶಭಕ್ತಿಯ ಮಹತ್ವ ಅರಿತು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ಯುವಜನತೆಗೆ ಕರೆ ನೀಡಿದರು.

ದೇಶದಲ್ಲಿ ಕೊರೋನಾ ವೈರಸ್ ಹರಡಿ ಜನತೆಗೆ ನಾನಾ ಸಮಸ್ಯೆ ತಂದೊಡ್ಡಿದೆ. ಈ ನಿಟ್ಟಿನಲ್ಲಿ ಕೋರ್ಟ್ ಕಲಾಪಗಳನ್ನು ಕೂಡ ಇಂದು ವರ್ಚವಲ್ ಹಿಯರಿಂಗ್ (ಆನ್‍ಲೈನ್) ಮೂಲಕ ನಡಸಬೇಕಾಗಿದೆ. ವಕೀಲರು ತಮ್ಮ ವಾದವನ್ನು ಆನ್ ಲೈನ್ ಮುಖಾಂತರ ಮಂಡಿಸಬೇಕಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಇಂದು ಆನ್ ಲೈನ್‍ನಲ್ಲಿ ಕಲಿಯುತ್ತಿರುವ ಪ್ರಸಂಗ ಬಂದೊದಗಿದೆ. ಇಡೀ ಜಗತ್ತೇ ಇಂದು ಕೋವಿಡ್‍ನಿಂದಾಗಿ ಇಂತಹ ತಂತ್ರಜ್ಞಾನಕ್ಕೆ ಮರೆಹೋಗಬೇಕಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ದೇಶದ ಜನರು ವಿಶ್ವಾಸ ಮತ್ತು ನಂಬಿಕೆ ಇಡಬೇಕಾಗಿದೆ. ಎಲ್ಲರೂ ನ್ಯಾಯಾಂಗದ ಘನತೆ-ಗೌರವವನ್ನು ಎತ್ತಿಹಿಡಿಯಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು. ಎಲ್ಲೂ ನ್ಯಾಯ ಸಿಗದಿದ್ದರಿಂದ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸದಿಂದ ಜನತೆ ಕೋರ್ಟ್‍ಗಳಿಗೆ ಬರುತ್ತಾರೆ. ಕಷ್ಟಪಟ್ಟು ದುಡಿಯುವ ಮೂಲಕ ಅವರÀ ಬಯಕೆಯನ್ನು ಈಡೇರಿಸಬೇಕು ಎಂದು ಸಿಬ್ಬಂದಿಗೆ ತಿಳಿ ಹೇಳಿದರು.

ಇಂಥ ಘನವೆತ್ತ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುವುದಕ್ಕೆ ನಾವು ಹೆಮ್ಮೆಪಡಬೇಕು. ಇಲ್ಲಿ ನ್ಯಾಯಧೀಶರು, ರಿಜಿಸ್ಟ್ರಾರ್‍ಗಳು, ವಕೀಲರು ಹಾಗೂ ಸಿಬ್ಬಂದಿಗಳಾಗಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ನಂತಹ ಸಂದರ್ಭದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಗಳನ್ನು ಹಂಚಿಕೊಂಡು ಕೆಲಸ ಮಾಡುತ್ತಿದ್ದಾರೆ. ನಾನು ಇದಕ್ಕೆ ಎಲ್ಲರನ್ನೂ ಅಭಿನಂದಿಸುತ್ತೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವೈದ್ಯರು, ನರ್ಸ್‍ಗಳು, ಅರಕ್ಷಕರು, ಸಫಾಯಿ ಕರ್ಮಚಾರಿ ಆರೋಗ್ಯ ಸಿಬ್ಬಂದಿ ಮತ್ತು ಕೊರೋನಾದಿಂದ ಗುಣಮುಖರಾಗಿ ಬಂದಿರುವ ಹೈ ಕೋರ್ಟ್ ಉಚ್ಛ ನ್ಯಾಯಾಲಯದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ವೇದಿಕೆ ಮೇಲೆ ನ್ಯಾಯಮೂರ್ತಿಗಳಾದ ನಟರಾಜ್ ರಂಗಸ್ವಾಮಿ, ಹಂಚಾಟೆ ಸಂಜೀವ ಕುಮಾರ, ಪಿ.ಎನ್. ದೇಸಾಯಿ, ಪಿ. ಕೃಷ್ಣಾ ಭಟ್, ಹೆಚ್ಚುವರಿ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ವಿಜಯ, ಕಲಬುರಗಿ ನ್ಯಾಯಾಲಯದ ವಕೀಲರ ಸಂಘದ ಅಧ್ಯಕ್ಷರಾದ ಅರುಣ ಕುಮಾರ ಬಿ. ಕಿಣ್ಣಿ ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago