ಕಲಬುರಗಿ: ನಗರದ ಗಂಜ್ ನಲ್ಲಿರುವ ICICI ಬ್ಯಾಂಕ್ನಲ್ಲಿ ಕುಡಿದ ಮತ್ತಿನಲ್ಲಿ ಬ್ಯಾಂಕ್ ಗೆ ಎಂಟ್ರಿ ಕೊಟ್ಟು ಕುಡಿಯಲು ಹಣ ಬೇಕು ಎಂದು ಭಾರಿ ಆತಂಕ ಸೃಷ್ಟಿಸಿ ದುಸ್ಸಾಹಸಕ್ಕೆ ಕೈ ಹಾಕಿರುವ ಘಟನೆ ನಡೆದಿದೆ.
ನಗರದ ಮಿಜಗುರಿ ಬಡಾವಣೆ ನಿವಾಸಿಯಾಗಿದ್ದು ಸುಲ್ತಾನ್(35) ಕಳೆದ ಗುರುವಾರ ಗಂಜ್ ಪ್ರದೇಶದಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ ಕುಡಿದ ಮತ್ತಿನಲ್ಲಿ ಬಂದ ಆಟಿಕೆಯ ಬಂದೂಕು ಇಟ್ಟುಕೊಂಡು ಅಲ್ಲಿದ್ದ ಜನರನ್ನು ಹೆದರಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ಕುಡುಕನ ಈ ಕೃತ್ಯದಿಂದ ಬ್ಯಾಂಕ್ ನಲ್ಲಿ ಆತಂಕ ಶುರುವಾಗಿ, ತಕ್ಷಣ ಬ್ಯಾಂಕ್ ಸಿಬ್ಬಂದಿ ಚೌಕ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರು. ಸ್ಥಳಕ್ಕೆ ಬಂದ ಪೊಲೀಸರು ಕುಡುಕನನ್ನು ಬಂಧಿಸಿದ್ದಾರೆ.
ಭಯ ಹುಟ್ಟಿಸಿದ ವ್ಯಕ್ತಿಗೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂದು ತಿಳಿದುಬಂದಿದ್ದು, ಕುಡಿಯಲು ಹಣಕ್ಕಾಗಿ ಅನೇಕರಿಗೆ ಬೆದರಿಸುತ್ತಿದ್ದ, ಆಟಿಕೆ ಬಂದೂಕು ತೋರಿಸಿ ಹಣ ಕೇಳ್ತಿದ್ದ, ಅನೇಕರ ಸಮೀಪ ಹೋಗಿ ಕೆಮ್ಮುತ್ತಿದ್ದ, ನೂರು, ಇನ್ನೂರು ರೂಪಾಯಿಗಾಗಿ ಬೆದರಿಕೆ ಹಾಕುತಿದ್ದ ಎಂಬ ಆರೋಪಗಳು ಕೇಳಿಬರುತ್ತಿವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…