ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಿದವರ ಮೇಲೆ ಲಾಠಿ ಪ್ರಹಾರ ಮಾಡಿ ಖಂಡಿಸಿ ಆಕ್ರೋಶ

0
505

ಶಹಾಬಾದ: ಬೆಳಗಾವಿಯ ಪೀರನವಾಡಿ ಗ್ರಾಮದ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಿದವರ ಮೇಲೆ ಲಾಠಿ ಪ್ರಹಾರ ಮಾಡಿ, ಪ್ರತಿಮೆಯನ್ನು ಅಲ್ಲಿಂದ ತೆಗೆದ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೆವೆ ಎಂದು ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಕಲಬುರಗಿ ಜಿಲ್ಲಾಧ್ಯಕ್ಷ ಬಸವರಾಜ ಮದ್ರಕಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ರಾಯಣ್ಣ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಮುಂದಾದ ಕರುನಾಡ ಸೇವಕ ಸಂಘಟನೆಯವರ ಮೇಲೆ ಲಾಠಿ ಪ್ರಹಾರ ಮಾಡಿ ಪ್ರತಿಮೆಯನ್ನು ಸ್ಥಳಾಂತರ ಮಾಡಿರುವುದು ಅಕ್ಷಮ್ಯ ಅಪರಾಧ. ನಾಡಿಗಾಗಿ, ಸ್ವತಂತ್ರಕ್ಕಾಗಿ ಹೋರಾಟ ಮಾಡಿದ ರಾಯಣ್ಣನ ಪ್ರತಿಮೆಯನ್ನು ತವರಿನಲ್ಲಿಯೇ ಅವಕಾಶ ನೀಡದಿದ್ದರೇ ಇವರೂ ಮತ್ತಾರ ಪ್ರತಿಮೆಗೆ ಅವಕಾಶ ನೀಡುತ್ತಾರೆ.

Contact Your\'s Advertisement; 9902492681

ಪೊಲೀಸರು ಮನಸ್ಸಿಗೆ ಬಂದಂತೆ ಮಾಡುತ್ತಿದ್ದಾರೆ.ರಾಜ್ಯ ಸರಕಾರ ಕಣ್ಮುಚ್ಚಿ ಕುಳಿತಿದೆ.ಕೂಡಲೇ ರಾಜ್ಯ ಸರಕಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಆ ಸ್ಥಳದಲ್ಲಿಯೇ ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೇ ಜಿಲ್ಲಾದಾದ್ಯಂತ ಸಕರ್ಾರದ ವಿರುದ್ಧ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here