ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಹುದ್ದೆಗಳ ಭರ್ತಿಗೆ ಸೋಮವಾರ ಕಲಬುರಗಿಯಲ್ಲಿ ನಡೆದ ಪೂರ್ವಭಾವಿ ಪರೀಕ್ಷೆಯ ಕೇಂದ್ರಗಳಿಗೆ ಕೆಪಿಎಸ್ಸಿ ಸದಸ್ಯ ಡಾ.ರಂಗರಾಜ ವನದುರ್ಗ ಭೇಟಿ ನೀಡಿ, ವೀಕ್ಷಿಸಿದರು.
ನಗರದ ಜಿಲ್ಲಾ ಕೋಟ್೯ ರಸ್ತೆಯ ಪಕ್ಕದ ಶ್ರೀಮತಿ ಪಿಲ್ಲೂ ಹೋಮಿ ಇರಾಣಿ ಮಹಿಳಾ ಮಹಾವಿದ್ಯಾಲಯ, ಮಹರ್ಷಿ ವಿದ್ಯಾಮಂದಿರ ಶಾಲೆ ಸೇರಿ ನಾನಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸುಸೂತ್ರ ಮತ್ತು ನಿಯಮಾನುಸಾರ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುತ್ತಿವೆಯೇ ಎಂದು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳ ಬಹುತೇಕ ಕೋಣೆಗಳಿಗೆ ಭೇಟಿ ನೀಡಿ, ವೀಕ್ಷಣೆ ಮಾಡಿದರು.
ಪರೀಕ್ಷೆಗೆ 2 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು: ನಗರದ ನಾನಾ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರು ಹುದ್ದೆಗಳಿಗೆ 2052 ಪರೀಕ್ಷಾರ್ಥಿಗಳು ಪೂರ್ವಭಾವಿ ಪರೀಕ್ಷೆಯ ಪ್ರಥಮ ಪತ್ರಿಕೆ ಸಾಮಾನ್ಯ ಅಧ್ಯಯನ, ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣೆ ದ್ವಿತೀಯ ಪತ್ರಿಕೆ ಬರೆದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…